×
ADVERTISEMENT
ಈ ಕ್ಷಣ :
ADVERTISEMENT

ಯಡ್ರಾಮಿ: ಪಟ್ಟಣದಲ್ಲಿ ಇಂದು ಡಾ ಅಂಬೇಡ್ಕರ್ ಜಯಂತಿ

Published 27 ಜೂನ್ 2023, 11:27 IST
Last Updated 27 ಜೂನ್ 2023, 11:27 IST
Comments
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಯಡ್ರಾಮಿ: ಪಟ್ಟಣದಲ್ಲಿ ಜೂನ್‌ 28ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಬಸವರಾಜ ಕಲಕೇರಿ ತಿಳಿಸಿದರು.

ಬುಧವಾರ ಬೆಳಿಗ್ಗೆ 11 ಗಂಟೆಗೆ ಬುದ್ದ ವೃತ್ತದಿಂದ ಹಿಡಿದು ಡಾ ಬಿಆರ್ ಅಂಬೇಡ್ಕರ್ ವೃತ್ತ ಮಾರ್ಗವಾಗಿ ಸರ್ದಾರ ಶರಣಗೌಡ ವೃತ್ತದವರೆಗೆ ಭವ್ಯ ಮೆರವಣಿಗೆ ಜರುಗುವುದು. ಸಂಜೆ 4 ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಹತ್ಯಾಳದ ಜಾಗತಿಕ ಮೈತ್ರೀ ಬೌದ್ಧ ಮಹಾಸಭಾದ ಧಮ್ಮನಾಗ ಬಂತೇ, ಯಡ್ರಾಮಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಚಿಗರಹಳ್ಳಿ ಮುರುಳಶಂಕರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ ಸಾನ್ನಿಧ್ಯ ವಹಿಸುವವರು.
ಶಾಸಕ ಡಾ ಅಜಯಸಿಂಗ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಭಾರತೀಯ ಬೌದ್ಧ ಮಹಾಸಭಾ ಕಾರ್ಯಾಧ್ಯಕ್ಷ, ಡಾ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ ಅಂಬೇಡ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಬೋಳ, ಶಿವರಾಜ ಪಾಟೀಲ ರದ್ದೇವಾಡಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಮುಖ್ಯ ಭಾಷಣಕಾರರಾಗಿ ನಟ ಚೇತನ್ ಅಹಿಂಸಾ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ರಾಜಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

undefined undefined

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT