×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ ಜಿಲ್ಲೆಯಲ್ಲಿ 178 ಪೊಲೀಸ್‌ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು

Published : 17 ಜನವರಿ 2022, 13:25 IST
ಫಾಲೋ ಮಾಡಿ
Comments

ಕೋಲಾರ: ಜಿಲ್ಲೆಯಲ್ಲಿ 178 ಮಂದಿ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಕೋವಿಡ್‌ 3ನೇ ಅಲೆಯ ಆರ್ಭಟಕ್ಕೆ ಪೊಲೀಸ್‌ ಇಲಾಖೆ ಬೆಚ್ಚಿಬಿದ್ದಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷವು ರಾಮನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯ ಬಂದೋಬಸ್ತ್‌ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಜಿಲ್ಲೆಯ ಪೊಲೀಸ್‌ ಸಿಬ್ಬಂದಿ ಪೈಕಿ ಹೆಚ್ಚಿನವರಿಗೆ ಸೋಂಕು ತಗುಲಿದೆ.

ಪಾದಯಾತ್ರೆಯ ಬಂದೋಬಸ್ತ್‌ ಕರ್ತವ್ಯ ಪೂರ್ಣಗೊಳಿಸಿ ಜಿಲ್ಲೆಗೆ ಮರಳಿದ ನಂತರ ಸಿಬ್ಬಂದಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಕೋವಿಡ್‌ ಪರೀಕ್ಷೆ ಮಾಡಿದಾಗ ಸೋಂಕು ಹರಡಿರುವುದು ದೃಢಪಟ್ಟಿದೆ. ಸೋಂಕಿತ ಸಿಬ್ಬಂದಿ ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ.

ಜಿಲ್ಲೆಯಲ್ಲಿ 178 ಮಂದಿ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಕೋವಿಡ್‌ 3ನೇ ಅಲೆಯ ಆರ್ಭಟಕ್ಕೆ ಪೊಲೀಸ್‌ ಇಲಾಖೆ ಬೆಚ್ಚಿಬಿದ್ದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT