ಕೋಲಾರ: ಜಿಲ್ಲೆಯ ಪಾಲಿಗೆ ಶುಭ ಶುಕ್ರವಾರವು ಅಶುಭವಾಗಿದ್ದು, ಕೊರೊನಾ ಸೋಂಕಿನ ಮಹಾ ಸ್ಫೋಟವಾಗಿದೆ. ಒಂದೇ ದಿನ 645 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ.

ಜಿಲ್ಲೆಯಲ್ಲಿ ಆರೇಳು ತಿಂಗಳಿಂದ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿರುವುದು ಆರೋಗ್ಯ ಇಲಾಖೆಯ ನಿದ್ದೆಗಡೆಸಿದೆ. ಸೋಂಕಿನ ನಾಗಾಲೋಟಕ್ಕೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ.

ಕೋಲಾರ ತಾಲ್ಲೂಕಿನ 186 ಮಂದಿಗೆ, ಮಾಲೂರು ತಾಲ್ಲೂಕಿನ 70 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 65 ಮಂದಿಗೆ, ಕೆಜಿಎಫ್ ತಾಲ್ಲೂಕಿನ 121 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 157 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 45 ಮಂದಿಗೆ ಮತ್ತು ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 3,200ಕ್ಕೆ ಏರಿಕೆಯಾಗಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

ಮನೆಗಳಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 526 ಮಂದಿ ಗುಣಮುಖರಾಗಿದ್ದಾರೆ. ಕೋಲಾರ ತಾಲ್ಲೂಕಿನ 179 ಮಂದಿ, ಮಾಲೂರು ತಾಲ್ಲೂಕಿನ 115, ಬಂಗಾರಪೇಟೆ ತಾಲ್ಲೂಕಿನ 50, ಕೆಜಿಎಫ್ ತಾಲ್ಲೂಕಿನ 95, ಮುಳಬಾಗಿಲು ತಾಲ್ಲೂಕಿನ 43, ಶ್ರೀನಿವಾಸಪುರ ತಾಲ್ಲೂಕಿನ 44 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯ ಪಾಲಿಗೆ ಶುಭ ಶುಕ್ರವಾರವು ಅಶುಭವಾಗಿದ್ದು, ಕೊರೊನಾ ಸೋಂಕಿನ ಮಹಾ ಸ್ಫೋಟವಾಗಿದೆ. ಒಂದೇ ದಿನ 645 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.