×
ADVERTISEMENT
ಈ ಕ್ಷಣ :
ADVERTISEMENT

ಗವಿಸಿದ್ಧೇಶ್ವರ ಜಾತ್ರೆಗೆ ಅಧಿಕೃತ ಚಾಲನೆ

Published : 17 ಜನವರಿ 2022, 5:16 IST
ಫಾಲೋ ಮಾಡಿ
Comments

ಕೊಪ್ಪಳ: ಸಂಸ್ಥಾನ ಗವಿಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಮಠದ ಆವರಣದಲ್ಲಿ ‘ಬಸವ ಪಟ ಆರೋಹಣ’ ಧಾರ್ಮಿಕದ ಮೂಲಕ ಭಕ್ತರು ಜಾತ್ರೆಗೆ ವಿಧ್ಯುಕ್ತ ಚಾಲನೆ ನೀಡಿದರು.

ಗವಿಸಿದ್ಧೇಶ್ವರ ಕರ್ತೃ ಗದ್ದುಗೆಯ ಸುತ್ತ 5 ಸುತ್ತ ಪ್ರದಕ್ಷಿಣೆ ಹಾಕುತ್ತಾ ಜಯಘೋಷಗಳೊಂದಿಗೆ ಶಿಲಾಸ್ತಂಭಕ್ಕೆ ಬಸವ ಪಟ ಕಟ್ಟುವುದರ ಮೂಲಕ ಜಾತ್ರಾ ಸಂಪ್ರದಾಯಕ್ಕೆ ಚಾಲನೆ ನೀಡಲಾಯಿತು.

ಗವಿಮಠದ ಬೆಟ್ಟದ ಮೇಲಿರುವ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ ನಡೆಯಿತು. ಗವಿಸಿದ್ಧೇಶ್ವರ ಗದ್ದುಗೆಗೆ ರುದ್ರಾಭಿಷೇಕ, ಪ್ರಸಾದ ವಿತರಣೆ ನಡೆಯಿತು. ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು.

ಕೊಪ್ಪಳ ಸಂಸ್ಥಾನ ಗವಿಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಮಠದ ಆವರಣದಲ್ಲಿ ‘ಬಸವ ಪಟ ಆರೋಹಣ’ ಧಾರ್ಮಿಕದ ಮೂಲಕ ಭಕ್ತರು ಜಾತ್ರೆಗೆ ವಿಧ್ಯುಕ್ತ ಚಾಲನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT