×
ADVERTISEMENT
ಈ ಕ್ಷಣ :
ADVERTISEMENT

ಅರಣ್ಯ ಸಂಪತ್ತು ಉಳಿಸಿ: ಅಮರೇಶ್ವರ ಶೆಟ್ಟರ

Published : 10 ಅಕ್ಟೋಬರ್ 2021, 7:29 IST
ಫಾಲೋ ಮಾಡಿ
Comments

ಕುಷ್ಟಗಿ: ಅರಣ್ಯ ನಾಶದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಮರಗಿಡಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸುವುದು ಮತ್ತು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಧ್ಯವಾದಷ್ಟು ಪ್ರಯತ್ನ ಮಾಡಬೇಕಿದೆ ಎಂದು ಆರ್ಯವೈಶ್ಯ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ್ವರ ಶೆಟ್ಟರ್ ಹೇಳಿದರು.

ವಾಸವಿ ಯುವಜನ ಮಹಾಸಭಾ ವತಿಯಿಂದ ಇಲ್ಲಿಯ ವಾಸವಿ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ ‘ವಾಸವಿ ವನ ಸಪ್ತಾಹ’ದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಕಾಳಜಿಯತ್ತ ವಾಸವಿ ಯುವಜನ ಸಂಘದ ಸದಸ್ಯರು ನಡೆಸಿರುವ ಪ್ರಯತ್ನ ಮಾದರಿಯಾಗಿದೆ ಎಂದರು.

‘ಕುರುಚಲು ಕಾಡುಗಳನ್ನು ಉಳಿಸಿಕೊಳ್ಳುವುದರಿಂದ ಅನೇಕ ವನ್ಯಜೀವಿಗಳಿಗೂ ಆಶ್ರಯ ದೊರಕಿಸಿಕೊಟ್ಟಂತಾಗುತ್ತದೆ. ಔಷಧ ಸಸ್ಯಗಳನ್ನು ಬೆಳೆಸುವುದರಿಂದ ಬಹಳಷ್ಟು ಪ್ರಯೋಜಗಳಿವೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆರ್ಯವೈಶ್ಯ ಯುವಜನ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಜಿ.ಪಿ.ನಾಗೇಶ ಮಾತನಾಡಿ, ಒಟ್ಟು 10 ಸಾವಿರ ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದ್ದು, ಕುಷ್ಟಗಿಯಲ್ಲಿಯೂ ಸಸಿಗಳನ್ನು ನಾಟಿ ಮಾಡಲಾಗುತ್ತಿದೆ. ಸಂಘದ ಯುವಕರ ಪರಿಸರದ ಮೇಲಿನ ಪ್ರೇಮ ಇತರರಿಗೂ ಪ್ರೇರಣೆಯಾಗಲಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಘಟಕದ ವಾಸವಿ ಯುವಜನ ಮಹಾಸಭಾ ಮಾಜಿ ಅಧ್ಯಕ್ಷ ಡಿ.ವಿ.ಸತ್ಯನಾರಾಯಣ, ಕುಷ್ಟಗಿ ವಾಸವಿ ಯುವಜನ ಸಂಘದ ಅಧ್ಯಕ್ಷ ಉಮೇಶ್‌, ಹಿರೇವಂಕಲಕುಂಟಾ ವಾಸವಿ ಯುವಜನ ಸಂಘದ ರಂಗನಾಥ, ವಿಜಯನಗರ ವಿಭಾಗದ ನಿರ್ದೇಶಕ ವೆಂಕಟೇಶ ತಮ್ಮಿನಾಳ ಸೇರಿದಂತೆ ವಾಸವಿ ಯುವಜನ ಸಂಘದ ಪದಾಧಿಕಾರಿಗಳು, ಸದಸ್ಯರು, ಹಿರಿಯರು ಪಾಲ್ಗೊಂಡಿದ್ದರು.

ಅರಣ್ಯ ನಾಶದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಮರಗಿಡಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸುವುದು ಮತ್ತು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಧ್ಯವಾದಷ್ಟು ಪ್ರಯತ್ನ ಮಾಡಬೇಕಿದೆ ಎಂದು ಆರ್ಯವೈಶ್ಯ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ್ವರ ಶೆಟ್ಟರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT