×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ ನಗರಸಭೆಗೆ ₹ 40 ಕೋಟಿ ಬಿಡುಗಡೆ: ಸಚಿವ ಭೈರತಿ ಬಸವರಾಜು

ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಭೈರತಿ ಬಸವರಾಜು
Published : 21 ಜನವರಿ 2022, 4:56 IST
ಫಾಲೋ ಮಾಡಿ
Comments

ಮಂಡ್ಯ: ‘ನಗರಸಭೆಗೆ ₹ 40 ಕೋಟಿ ಬಿಡುಗಡೆ ಮಾಡಲು ಸರ್ಕಾರ ಈಗಾಗಲೇ ಕ್ರಮ ವಹಿಸಿದೆ. ನಗರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ಆಯೋ ಜಿಸಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂಡ್ಯ ನಗರಕ್ಕೆ ಅಗತ್ಯವಾಗಿ ಸುಸಜ್ಜಿತ ಒಳಚರಂಡಿ ವ್ಯವಸ್ಥೆ, ಸಮರ್ಪಕ ಕುಡಿಯುವ ನೀರು ಸರಬರಾಜು ಕಾಮಗಾರಿಗಳು ನಡೆಯುತ್ತಿವೆ. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆಯೂ ಆಯುಕ್ತರಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಕ್ರಮ ವಹಿಸಿದ್ದಾರೆ ಎಂದರು.

ಈಗಾಗಲೇ ಮಂಡ್ಯ ನಗರಸಭೆಗೆ ಸರ್ಕಾರ ₹ 40 ಕೋಟಿ ಬಿಡುಗಡೆ ಮಾಡಲು ಕ್ರಮ ವಹಿಸಿದೆ. ಎಚ್‌.ಡಿ.ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಬಿಡುಗಡೆಯಾಗಿದ್ದ ₹ 50 ಕೋಟಿ ಅನುದಾನದ ಬಿಡುಗಡೆಗೂ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಲಾಗುವುದು. ನಗರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದರ ಬಗ್ಗೆ, ನಗರದ ಬಡಾವಣೆಗಳ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.

ಒಂದು ತಿಂಗಳೊಳಗೆ ನಗರದ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದಿನ ಸಭೆಯಲ್ಲಿ ಕಾರ್ಯಕ್ರಮಗಳ ಬಗ್ಗೆ ತಿಳಿಸುವಂತೆ ಸೂಚಿಸಲಾಗಿದೆ. ನಗರದಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಬೇಕು. ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಎಂ.ಶ್ರೀನಿವಾಸ್ ಅವರು ಮನವಿ ಮಾಡಿದ್ದಾರೆ, ಅದರಂತೆ ಕೆಲಸ ನಿರ್ವಹಿಸಲಾಗುವುದು ಎಂದರು.

ವಾರಾಂತ್ಯದ ಕರ್ಫ್ಯೂ ಸಡಿಲಿಕೆಗೆ ಸೇರಿದಂತೆ ಇತರ ವಿಷಯಗಳ ಕುರಿತಾದ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಕ್ರಮ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶುಕ್ರವಾರ ಕೋವಿಡ್ ಸಭೆ ನಡೆಯಲಿದೆ. ಅಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯದ ಜನ ಸಹಕರಿಸಬೇಕು. ಜನರ ಆರೋಗ್ಯ ಮತ್ತು ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ತಜ್ಞರ ಸಲಹೆಯಂತೆ ಕ್ರಮ ವಹಿಸಲಾಗುವುದು. ಅಲ್ಲಿ ಕೈಗೊಳ್ಳುವ ಎಲ್ಲ ತೀರ್ಮಾನಕ್ಕೂ ನಾವು ಬದ್ಧರಿದ್ದು, ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್ ಮಂಜು, ಮುಡಾ ಅಧ್ಯಕ್ಷ ದೊರೆಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ಜಿ.ಪಂ. ಸಿಇಒ ದಿವ್ಯಪ್ರಭು, ಪಾಂಡವಪುರ ಉಪವಿಭಾಗಾಧಿಕಾರಿ ಐಶ್ವರ್ಯ, ನಗರಸಭೆ ಪೌರಾಯುಕ್ತ ಎಸ್.ಲೋಕೇಶ್ ಭಾಗವಹಿಸಿದ್ದರು.

ಮಂಡ್ಯ: ‘ನಗರಸಭೆಗೆ ₹ 40 ಕೋಟಿ ಬಿಡುಗಡೆ ಮಾಡಲು ಸರ್ಕಾರ ಈಗಾಗಲೇ ಕ್ರಮ ವಹಿಸಿದೆ. ನಗರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT