ಪಾಂಡವಪುರ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಬಂಧನ ವಿರೋಧಿಸಿ ಕಾನೂನು ಭಂಗ ಚಳವಳಿ ನಡೆಸಲು ಗುರುವಾರ ಪಟ್ಟಣಕ್ಕೆ
ಬಂದಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಹಾಗೂ 54 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ತಾಲ್ಲೂಕು ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಕೆಆರ್‌ಎಸ್ ಪಕ್ಷದ 9 ಮಂದಿ ಕಾರ್ಯಕರ್ತರ ಬಂಧನ ವಿರೋಧಿಸಿ ಪಾಂಡವಪುರ ಚಲೋ ರೂಪಿಸಲಾಗಿತ್ತು. ಪಟ್ಟಣದ ಐದು ದೀಪ ವೃತ್ತಕ್ಕೆ ಬರುತ್ತಿದ್ದಂತೆ ರವಿಕೃಷ್ಣಾ ರೆಡ್ಡಿ ಅವರನ್ನು ಸಬ್ ಇನ್‌ಸ್ಪೆಕ್ಟರ್ ನೇತೃತ್ವದ ಪೊಲೀಸರು ತಡೆದರು.

ಜಿಲ್ಲೆಯಾದ್ಯಂತ ಕೋವಿಡ್ ಕಾರಣದಿಂದ 144 ನಿಷೇಧಾಜ್ಞೆ ಜಾರಿಯಲ್ಲಿದೆ. ಪ್ರತಿಭಟನೆಗಳಿಗೆ ಅವಕಾಶವಿಲ್ಲ. ನಮ್ಮೊಂದಿಗೆ ಬನ್ನಿ ಎಂದು ಪೊಲೀಸರು ರವಿಕೃಷ್ಣಾ ರೆಡ್ಡಿ ಅವರ ಮನವೊಲಿಸಲು ಪ್ರಯತ್ನಿಸಿದರು. ಆದರೆ, ಒಪ್ಪದ ರವಿಕೃಷ್ಣಾ ರೆಡ್ಡಿ ಹಾಗೂ 54 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸರ ಹಾಗೂ ತಾಲ್ಲೂಕು ಆಡಳಿತದ ವಿರುದ್ಧ ಕೆಆರ್‌ಎಸ್ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ. ನಾವು ನ್ಯಾಯ ಕೇಳಲು ಬಂದಿದ್ದೇವೆಯೇ ಹೊರತು ಗುಂಪು ಕಟ್ಟಿಕೊಂಡು ಜಗಳ ಮಾಡಲು ಬಂದಿರಲಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವು ರಾಜಕಾರಣಿಗಳು ಜನರನ್ನು ಸೇರಿಸಿಕೊಂಡು ಸಭೆ, ಸಮಾರಂಭ, ಹೋರಾಟ ಮಾಡುತ್ತಿದ್ದಾರೆ. ಆದರೆ, ಇಲ್ಲಿ ಕೋವಿಡ್ ಕಾರಣ ನೀಡಿ ನಮ್ಮನ್ನು ಬಂಧಿಸಿರುವುದು ಸರಿಯಾದ ಕ್ರಮವಲ್ಲ. ಇಲ್ಲಿನ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದರು.

ಪಾಂಡವಪುರ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಬಂಧನ ವಿರೋಧಿಸಿ ಕಾನೂನು ಭಂಗ ಚಳವಳಿ ನಡೆಸಲು ಗುರುವಾರ ಪಟ್ಟಣಕ್ಕೆ ಬಂದಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಹಾಗೂ 54 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.