ಮೈಸೂರು: ‘ದಸರಾ ನಂದಿ ಧ್ವಜ ಕಂಬ ತಯಾರಿಸುವ ಯೋಗೇಶ್ ಶಿಲ್ಪಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು’ ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ ಆಗ್ರಹಿಸಿದರು.

‘ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಂದಿ ಧ್ವಜ ಕಂಬ ತಯಾರಿಕೆಯಲ್ಲಿ ಕಳೆದ 55 ವರ್ಷಗಳಿಂದ ತೊಡಗಿಸಿಕೊಂಡಿದ್ದರೂ ಯೋಗೇಶ್ ಅವರ ಸೇವೆಯನ್ನು ಸರ್ಕಾರ ಪರಿಗಣಿಸಿಲ್ಲ. ಅರ್ಹ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಖಾಸಗಿ ದಸರಾ ಆಚರಿಸಿ ಪರಂಪರೆಯ ಮುಂದುವರಿಕೆಗೆ ಕಾರಣರಾದ ಕನ್ನಡ ಕ್ರಾಂತಿದಳ ಸಂಸ್ಥಾಪಕ ನಾ.ನಾಗಲಿಂಗಸ್ವಾಮಿ ಕುಟುಂಬವನ್ನು ಎಲ್ಲ ದಸರೆಯಲ್ಲೂ ಜಿಲ್ಲಾಡಳಿತವು ವಿಶೇಷವಾಗಿ ಆಹ್ವಾನ ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.

‘ಕೋವಿಡ್ ಸಂದರ್ಭದಲ್ಲಿ ಕಲಾವಿದರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಭರವಸೆಯನ್ನಷ್ಟೇ ನೀಡಿದೆ. ಪ್ರಶಸ್ತಿ ಆಯ್ಕೆಯಲ್ಲೂ ಅರ್ಹರನ್ನು ಪರಿಗಣಿಸುತ್ತಿಲ್ಲ’ ಎಂದು ಸಂಘಟನೆಯ ಮುಖಂಡ ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.

ಸಂಘಟನೆಯ ಪ್ರಕಾಶ್ಗೌಡ, ಲೋಕೇಶ್, ಚೇತನ್ ಇದ್ದರು.

ದಸರಾ ನಂದಿ ಧ್ವಜ ಕಂಬ ತಯಾರಿಸುವ ಯೋಗೇಶ್ ಶಿಲ್ಪಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು’ ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.