ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದರಿಂದಲೇ ಸುಪ್ರೀಂಕೋರ್ಟ್ ನೇಮಕಾತಿಯನ್ನು ರದ್ದುಗೊಳಿಸಿದೆ. 362 ಮಂದಿ ಈ ತೀರ್ಪಿನ ವಿರುದ್ಧ ಒಬ್ಬ ರಾಜಕಾರಣಿಗೆ ಮೇಲ್ಮನವಿ ಸಲ್ಲಿಸುತ್ತಾರೆ. ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತಾರೆ. ಅವರ ಪತ್ರ ಆಧರಿಸಿ ಕ್ರಮ ತೆಗೆದುಕೊಳ್ಳಲು ಕಡತ ಮಂಡಿಸುವಂತೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ (ಸಿಎಸ್) ಸೂಚಿಸುತ್ತಾರೆ. ಈ ದೇಶದಲ್ಲಿ ನ್ಯಾಯ ವ್ಯವಸ್ಥೆ ಎಲ್ಲಿಗೆ ತಲುಪಿದೆ’ ಎಂದು ಪ್ರಶ್ನಿಸಿದರು.