ಮೈಸೂರು: ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆಯೇ ಮೈಸೂರಿಗೆ ಬರುವ ಪ್ರವಾಸಿಗರು ಕಡಿಮೆಯಾಗಿದ್ದಾರೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದ ಚಾಮರಾಜೇಂದ್ರ ಮೃಗಾಲಯ, ಮೂರನೇ ಅಲೆಯಲ್ಲೂ ನಷ್ಟದ ಭೀತಿ ಎದುರಿಸುತ್ತಿದೆ.
ದಸರಾ ಬಳಿಕ ಮೈಸೂರಿನಲ್ಲಿ ಪ್ರವಾಸೋದ್ಯಮ ಚೇತರಿಸಿಕೊಳ್ಳುತ್ತಿತ್ತು. ವರ್ಷಾಂತ್ಯದ ವೇಳೆ ಹೆಚ್ಚಿನ ಪ್ರವಾಸಿಗರು ಬಂದಿದ್ದರಿಂದ, ಮೃಗಾಲಯಕ್ಕೂ ಆದಾಯ ಬರತೊಡಗಿತ್ತು. ಆದರೆ, ಹೊಸ ವರ್ಷದ ಆರಂಭದಲ್ಲಿ ಮತ್ತೆ ಕೋವಿಡ್ ಹೆಚ್ಚಾಗುತ್ತಿರುವುದು ಚಿಂತೆಗೆ ಕಾರಣವಾಗಿದೆ.