×
ADVERTISEMENT
ಈ ಕ್ಷಣ :
ADVERTISEMENT

ರಾಮನಗರದ ವಿವಿಧೆಡೆ ಮಳೆ: ರೈತರ ಹರ್ಷ

Published : 10 ಅಕ್ಟೋಬರ್ 2021, 5:34 IST
ಫಾಲೋ ಮಾಡಿ
Comments

ರಾಮನಗರ: ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನದಿಂದ ಉತ್ತಮ ಮಳೆ ಸುರಿದಿದೆ.

ರಾಮನಗರದಲ್ಲಿ ಶುಕ್ರವಾರ ರಾತ್ರಿ ಗುಡುಗು–ಸಿಡಿಲಿನೊಂದಿಗೆ ಕೆಲಕಾಲ ಉತ್ತಮ ಮಳೆ ಸುರಿಯಿತು. ಶನಿವಾರ ದಿನವಿಡೀ ಮೋಡ ಕವಿದ ವಾತಾವರಣ ಇದ್ದು, ಆಗಾಗ್ಗೆ ಸಾಧಾರಣ ಮಳೆ ಆಯಿತು. ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ರಾಗಿ ಬೆಳೆಗೆ ಹಾನಿಯಾಗಿದ್ದು, ಸದ್ಯ ಸುರಿಯುತ್ತಿರುವ ವರ್ಷಧಾರೆಯೂ ಸಂಜೀವಿನಿಯಂತೆ ಬಂದಿದೆ. ಶುಕ್ರವಾರ ರಾತ್ರಿ ಜಿಲ್ಲೆಯಲ್ಲಿ ಸರಾಸರಿ 16 ಮಿ.ಮೀ ಮಳೆಯಾಗಿದೆ.

ಅಕ್ಟೋಬರ್‌ನಲ್ಲಿ ಈವರೆಗೆ 60 ಮಿ.ಮೀ. ವಾಡಿಕೆ ಮಳೆಗೆ ಪ್ರತಿಯಾಗಿ 68 ಮಿ.ಮೀ.ನಷ್ಟು ಮಳೆ ಸುರಿದಿದ್ದು, ವಾಡಿಕೆಗಿಂತ ಶೇ 13ರಷ್ಟು ಹೆಚ್ಚು ವರ್ಷಧಾರೆ ಆಗಿದೆ.

ರಾಮನಗರ ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನದಿಂದ ಉತ್ತಮ ಮಳೆ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT