ಮಾಗಡಿ: ತಾಲ್ಲೂಕಿನಲ್ಲಿ ಶನಿವಾರ 48 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕಾರಿಯಾಗಿದೆ. ತಾಲ್ಲೂಕು ಆಡಳಿತ ಸೋಂಕು ಹರಡದಂತೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಜನರು ಗುಂಪುಗೂಡಿದ್ದರು. ಮಾಸ್ಕ್ ಧರಿಸುವವರ ಸಂಖ್ಯೆ ತೀರಾ ಕಡಿಮೆ. ಗುಂಪು ಗುಂಪಾಗಿ ಸೇರುವುದು ಹೆಚ್ಚುತ್ತಿದೆ. ಸಂತೆ, ಉತ್ಸವಗಳು, ದೇವಾಲಯಗಳಿಗೆ ಭೇಟಿ ನೀಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊರೊನಾ ಕಂಟಕದ ನಡುವೆ ಸುಗ್ಗನಹಳ್ಳಿ ಲಕ್ಷ್ಮೀನರಸಿಂಹಸ್ವಾಮಿ, ತಿರುಮಲೆ ರಂಗನಾಥಸ್ವಾಮಿ ಸೇರಿದಂತೆ ಇತರೆ ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಕೊರೊನಾ ಕೈಮೀರಿ ಹೋಗುವ ಮುನ್ನ ಸಾರ್ವಜನಿಕರು ಎಚ್ಚರಿಕೆವಹಿಸಬೇಕು ಎಂಬುದು ವೈದ್ಯರ ಸಲಹೆ.

ತಾಲ್ಲೂಕಿನಲ್ಲಿ ಶನಿವಾರ 48 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.