×
ADVERTISEMENT
ಈ ಕ್ಷಣ :
ADVERTISEMENT

ಆತಂಕಪಡದೆ ಶಾಲಾ–ಕಾಲೇಜು ಆರಂಭಿ‌ಸಿ

ಕೋವಿಡ್ ತಜ್ಞರ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗೆ ತಜ್ಞ ವೈದ್ಯರ ಸಲಹೆ
Published : 21 ಜನವರಿ 2022, 5:10 IST
ಫಾಲೋ ಮಾಡಿ
Comments

ಶಿವಮೊಗ್ಗ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದರೂ ಆತಂಕಪಡುವ ಅಗತ್ಯವಿಲ್ಲ. ಕೋವಿಡ್‌ ಪಾಸಿಟಿವ್‌ ಬಂದ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ, ಶಾಲಾ–ಕಾಲೇಜು ಆರಂಭಿಸುವುದು ಉತ್ತಮ ಎಂದು ತಜ್ಞ ವೈದ್ಯರು ಸಲಹೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಕೋವಿಡ್ ಹೆಚ್ಚಿನ ಪರಿಣಾಮ ಬೀರಿಲ್ಲ. ಪ್ರತಿ ಶಾಲಾ–ಕಾಲೇಜಿನಲ್ಲಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ರೋಗ ಲಕ್ಷಣವಿರುವ ಮಕ್ಕಳನ್ನು ಮನೆಗೆ ಕಳುಹಿಸಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಬೇಕು ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆಯಲ್ಲಿ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿರುವವರ ಪ್ರಮಾಣ ಅತಿ ಕಡಿಮೆ ಇದೆ. ಪ್ರಸ್ತುತ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ 63 ಜನರ ಪೈಕಿ ಇಬ್ಬರಿಗೆ ಮಾತ್ರ ಆಮ್ಲಜನಕ ಒದಗಿಸುವ ಅಗತ್ಯ ಬಿದ್ದಿದೆ. ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿದರೆ ಬಹುತೇಕ ಮಂದಿಯನ್ನು ಅಲ್ಲಿಗೆ ಸೇರಿಸಬಹುದು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬರಿಗೂ ಲಸಿಕೆ ಅಗತ್ಯ: ಎರಡೂ ಡೋಸ್ ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪರಿಣಾಮ ಬೀರಿದ್ದು, ಬಹುತೇಕ ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಹಂತದ ಲಸಿಕೆ ಪಡೆಯದ 17 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಕೋವಿಡ್ ಲಕ್ಷಣಗಳು ಹೆಚ್ಚಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಶೇ 99 ಮಂದಿ ಪ್ರಥಮ ಡೋಸ್ ಹಾಗೂ ಶೇ 84ರಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಡಾ.ಶ್ರೀಕಾಂತ್ ಹೆಗ್ಡೆ, ಡಾ.ಮಲ್ಲಿಕಾರ್ಜುನ ಕೊಪ್ಪದ್, ಡಾ.ಪಾಟೀಲ್, ಡಾ.ಸತೀಶ್ಚಂದ್ರ, ಡಾ.ನಾಗರಾಜ ನಾಯಕ್, ಡಾ.ಮಲ್ಲಪ್ಪ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ, ಡಾ.ಕಿರಣ್, ಸಮಿತಿ ಸದಸ್ಯರು ಇದ್ದರು.

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್

ಒಂದೆರಡು ದಿನಗಳಲ್ಲಿ ಅಗತ್ಯವಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲಾಗು
ವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಫೋನ್‌ನಲ್ಲಿ ಟ್ರಯೇಜ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಅಗತ್ಯ ಔಷಧ ಒಳಗೊಂಡ ಕಿಟ್ ನೀಡಲಾಗುತ್ತಿದೆ. ಶಾಲಾ–ಕಾಲೇಜುಗಳಲ್ಲಿ ಸಹ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.

ಶಿವಮೊಗ್ಗ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದರೂ ಆತಂಕಪಡುವ ಅಗತ್ಯವಿಲ್ಲ. ಕೋವಿಡ್‌ ಪಾಸಿಟಿವ್‌ ಬಂದ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ, ಶಾಲಾ–ಕಾಲೇಜು ಆರಂಭಿಸುವುದು ಉತ್ತಮ ಎಂದು ತಜ್ಞ ವೈದ್ಯರು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT