ತೀರ್ಥಹಳ್ಳಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಈಚೆಗೆ ವಿದ್ಯಾರ್ಥಿಯೊಬ್ಬ ಕೇಸರಿ ಶಾಲು ಹಾಕಿಕೊಂಡು ಬಂದಿರುವುದಕ್ಕೆ ಪ್ರತಿಯಾಗಿ ಗುರುವಾರ 25 ವಿದ್ಯಾರ್ಥಿನಿಯರು ಬುರ್ಖಾ–ಹಿಜಾಬ್ ಹಾಕಿಕೊಂಡು ಬಂದಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ವಿದ್ಯಾರ್ಥಿನಿಯರಿಗೆ ಬುರ್ಖಾ ಧರಿಸಲು ಅವಕಾಶ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯರು ಕಾಲೇಜು ಮಂಡಳಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.

ಏನಿದು ವಿವಾದ?: ‘ಕಾಲೇಜಿಗೆ ಬುರ್ಖಾ ಹಾಕಿಕೊಂಡು ಬರುವುದಾದರೆ ನಮಗೆ ಕೇಸರಿ ಶಾಲು ಹಾಕಲು ಅವಕಾಶ ನೀಡಬೇಕು’ ಎಂದು ಕೆಲ ತಿಂಗಳ ಹಿಂದೆ ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಸಭೆ ನಡೆಸಿದ್ದ ಕಾಲೇಜು ಆಡಳಿತ ಮಂಡಳಿ, ‘ಕಾಲೇಜಿನ ಆವರಣ ಹೊರತುಪಡಿಸಿ ತರಗತಿಯೊಳಗೆ ಯಾವುದೇ ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್, ಕೇಸರಿ ಶಾಲು ಹಾಕಿಕೊಂಡು ಬರಲು ಅವಕಾಶ ಇಲ್ಲ. ವಸ್ತ್ರಸಂಹಿತೆಯನ್ನು ಪಾಲಿಸಬೇಕು’ ಎಂದು ತೀರ್ಮಾನ ಕೈಗೊಂಡಿತ್ತು. ಬಳಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಸ್ತ್ರಸಂಹಿತೆ ಪಾಲಿಸುತ್ತಿದ್ದರು. ಆದರೆ, ಈಚೆಗೆ ವಿದ್ಯಾರ್ಥಿಯೊಬ್ಬ ಕೇಸರಿ ಶಾಲು ಹಾಕಿಕೊಂಡು ಬಂದ ಕಾರಣ ವಿವಾದ ಮತ್ತೆ ಶುರುವಾಗಿದೆ.

‘ಕೆಲ ವಿದ್ಯಾರ್ಥಿಗಳು ನಿಯಮ ಉಲ್ಲಂಘಿಸುತ್ತಿದ್ದಾರೆ. ಈ ಸಂಬಂಧ ಆಡಳಿತ ಮಂಡಳಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಾಚಾರ್ಯರಾದ ವೈ.ಎಂ. ಸುಧಾ ಪ್ರತಿಕ್ರಿಯಿಸಿದರು.

‘ಸಭೆ ನಡೆಸಿ ಕಠಿಣ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ನಿಯಮ ಉಲ್ಲಂಘಿಸುವುದು ಸರಿಯಲ್ಲ’ ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ನಾಗರಾಜ್ ಶೆಟ್ಟಿ ತಿಳಿಸಿದರು.

ಪಟ್ಟಣದ ಜ್ಯೂನಿಯರ್ ಕಾಲೇಜಿನಲ್ಲಿ ಗುರುವಾರ ಬುರ್ಖಾ, ಹಿಜಬ್ ಹಾಕಿಕೊಳ್ಳಲು ಅನುಮತಿ ಕೇಳಿದ್ದು ವಿವಾದಕ್ಕೆ ಗುರಿಯಾಗಿದೆ. ಇದರ ಬೆನ್ನಲ್ಲೆ ಪಟ್ಟಣ ಪಂಚಾಯಿತಿ ಸದಸ್ಯರು ಬುರ್ಖಾ ಧರಿಸಿ ನೀಡಬೇಕೆಂದು ಆಗ್ರಹ ಮಾಡಿರುವುದು ವಿವಾದಕ್ಕೆ ತುಪ್ಪ ಹಾಕಿದಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.