×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್ ಜನಜಾಗೃತಿ ಯಾತ್ರೆ

ಜಿಲ್ಲೆಯ ಆಯ್ದ 30 ಗ್ರಾಮಗಳಲ್ಲಿ ಸಂಚಾರ
Last Updated 21 ಜನವರಿ 2022, 7:55 IST
Comments
ಅಕ್ಷರ ಗಾತ್ರ

ತುಮಕೂರು: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಆರಂಭಿಸಿರುವ ಕೋವಿಡ್ ತಡೆಗೆ ಜಾಗೃತಿ ಮೂಡಿಸುವ ರಥ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ನಗರದಲ್ಲಿ ಚಾಲನೆ ನೀಡಿದರು.

ಜನಜಾಗೃತಿ ರಥ ಜ. 29ರ ವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಆಯ್ದ 30 ಹಳ್ಳಿಗಳಲ್ಲಿ ಸಂಚರಿಸಲಿದೆ. ಸಂಗೀತ ಮತ್ತು ನಾಟಕ ಕಲಾ ತಂಡಗಳಿಂದ ಜಾಗೃತಿ ಗೀತೆ, ನಾಟಕ, ಮ್ಯಾಜಿಕ್ ಶೋಗಳ ಮೂಲಕ ಕೋವಿಡ್ ಮತ್ತು ಓಮೈಕ್ರಾನ್‌ ಹರಡುವಿಕೆ ಮತ್ತು ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಲಿದೆ.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕ ಜಿ.ಡಿ. ಹಳ್ಳಿಕೇರಿ, ಎಸ್. ರಾಮಕೃಷ್ಣ ಉಪಸ್ಥಿತರಿದ್ದರು.

ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಆರಂಭಿಸಿರುವ ಕೋವಿಡ್ ತಡೆಗೆ ಜಾಗೃತಿ ಮೂಡಿಸುವ ರಥ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ನಗರದಲ್ಲಿ ಚಾಲನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT