×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ಕೆಎಂಸಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ

ಫಾಲೋ ಮಾಡಿ
Comments

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಸೋಮವಾರ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ಕುರಿತು ಜಾಗೃತಿ ಹಾಗೂ ಮುಕ್ತ ಸಂವಾದ ಕಾರ್ಯಕ್ರಮ ನಡೆಯಿತು.

ರೋಗಿಗಳು ಹಾಗೂ ಅವರ ಅವಲಂಬಿತರು, ಸಾರ್ವಜನಿಕರಿಗಾಗಿ ಜಾಗೃತಿ ಕಾರ್ಯಕ್ರಮ ಹಾಗೂ ಮುಕ್ತ ಮಾತುಕತೆ ನಡೆಯಿತು. ಮನೋವೈದ್ಯಶಾಸ್ತ್ರ ವಿಭಾಗದ ಸಲಹೆಗಾರ ಡಾ.ಪಿ.ಎನ್‌.ಅಭಿರಾಮ್ ಸಾಮಾನ್ಯ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ಬಗ್ಗೆ ಹಾಗೂ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಎ. ಜೈನ್ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ನಿರ್ವಹಣೆಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಪ್ರಯೋಜನ ಪಡೆದರು.

ಜಾಗತಿಕ ಮಾನಸಿಕ ಆರೋಗ್ಯ ಶಿಕ್ಷಣ, ಜಾಗೃತಿ ಮತ್ತು ಸಾಮಾಜಿಕ ಕಳಂಕದ ವಿರುದ್ಧ ಹೋರಾಡುವ ದಿನವಾಗಿ ಅ.10ರಂದು ವಿಶ್ವದಾದ್ಯಂತ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಗುವುದು. 1992ರಲ್ಲಿ ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ ಅಡಿಯಲ್ಲಿ ವಿಶ್ವ ಮಾನಸಿಕ ದಿನ ಆಚರಿಸಲಾಯಿತು. ಪ್ರಪಂಚದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಸೋಮವಾರ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ಕುರಿತು ಜಾಗೃತಿ ಹಾಗೂ ಮುಕ್ತ ಸಂವಾದ ಕಾರ್ಯಕ್ರಮ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT