×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ: ನಾರಾಯಣಗುರು ಸ್ತಬ್ಧಚಿತ್ರ ತಿರಸ್ಕಾರಕ್ಕೆ ಖಂಡನೆ

ಫಾಲೋ ಮಾಡಿ
Comments

ಶಿರಸಿ: ಗಣರಾಜೋತ್ಸವದ ಪ‍ಥಸಂಚಲನದಲ್ಲಿ ಬ್ರಹ್ಮರ್ಷಿ ನಾರಾಯಣಗುರು ಅವರ ಸ್ತಬ್ಧಚಿತ್ರ ಮೆರವಣಿಗೆ ನಡೆಸಲು ಕೇರಳ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬ್ರಹರ್ಷಿ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ಜಿಲ್ಲಾ ಘಟಕದ ಸದಸ್ಯರು ಉಪವಿಭಾಗಾಧಿಕಾರಿ ಕಚೇರಿಯ ಶಿರಸ್ತೇದಾರ್ ಶೈಲಜಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಸಾಮಾಜಿಕ ನ್ಯಾಯ ಪರಿಪಾಲನೆಯ ಜಾಗೃತಿ ಮೂಡಿಸಿದ್ದ ದಾರ್ಶನಿಕ ನಾರಾಯಣಗುರು ಅವರ ಸ್ತಬ್ಧಚಿತ್ರ ಮೆರವಣಿಗೆಗೆ ಅವಕಾಶ ನೀಡದೆ ಕೇಂದ್ರ ಸರ್ಕಾರವು ನಾರಾಯಣ ಗುರು ಅವರ ಅನುಯಾಯಿಗಳಿಗೆ ಅವಮಾನ ಮಾಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮಾನವತಾವಾದಿಯಾಗಿದ್ದ ನಾರಾಯಣಗುರು ಅವರ ಸ್ತಬ್ಧಚಿತ್ರದ ಬದಲು ಶಂಕರಾಚಾರ್ಯ ಸ್ತಬ್ಧಚಿತ್ರ ಪ್ರದರ್ಶಿಸಲು ಸೂಚಿಸಿ ಕೇಂದ್ರ ಸರ್ಕಾರ ಕೇರಳ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದನ್ನು ಖಂಡಿಸುತ್ತೇವೆ’ ಎಂದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ನಾಯ್ಕ, ತಾಲ್ಲೂಕು ಘಟಕದ ಅಧ್ಯಕ್ಷ ಶಶಿಕಾಂತ ನಾಯ್ಕ ಅಂಡಗಿ, ಶೇಖರ ಪೂಜಾರಿ, ಮಹೇಶ ನಾಯ್ಕ, ಮಧುಕರ ಬಿಲ್ಲವ, ಆನಂದ ನಾಯ್ಕ, ದಿನೇಶ್ ನಾಯ್ಕ, ರವಿ ಪೂಜಾರಿ, ಹರೀಶ್ ನಾಯ್ಕ, ಪ್ರಕಾಶ ನಾಯ್ಕ, ನವೀನ್ ನಾಯ್ಕ ಇತರರು ಇದ್ದರು.

ಗಣರಾಜೋತ್ಸವದ ಪ‍ಥಸಂಚಲನದಲ್ಲಿ ಬ್ರಹ್ಮರ್ಷಿ ನಾರಾಯಣಗುರು ಅವರ ಸ್ತಬ್ಧಚಿತ್ರ ಮೆರವಣಿಗೆ ನಡೆಸಲು ಕೇರಳ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬ್ರಹರ್ಷಿ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ಜಿಲ್ಲಾ ಘಟಕದ ಸದಸ್ಯರು ಉಪವಿಭಾಗಾಧಿಕಾರಿ ಕಚೇರಿಯ ಶಿರಸ್ತೇದಾರ್ ಶೈಲಜಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT