×
ADVERTISEMENT
ಈ ಕ್ಷಣ :
ADVERTISEMENT

ಪೂರ್ವ ಕೇಂದ್ರ ರೈಲ್ವೆ: SSLC, ITI ವಿದ್ಯಾರ್ಹತೆ; 2206 ಅಪ್ರೆಂಟಿಸ್‌ ಹುದ್ದೆಗಳು

Published : 10 ಅಕ್ಟೋಬರ್ 2021, 12:02 IST
ಫಾಲೋ ಮಾಡಿ
Comments

ನವದೆಹಲಿ: ಈಸ್ಟ್‌ ಸೆಂಟ್ರಲ್‌ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 2206 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ನೇರ ನೇಮಕಾತಿಯಾಗಿರುತ್ತದೆ.

ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ

ಒಟ್ಟು ಹುದ್ದೆಗಳ ಸಂಖ್ಯೆ: 2206

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್‌ಸಿ / ಎಸ್‌ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ ವಿಧಾನ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://recruitmentweb.net ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 05, ನವೆಂಬರ್‌ 2021

ವೆಬ್‌ಸೈಟ್‌: https://recruitmentweb.net

ಈಸ್ಟ್‌ ಸೆಂಟ್ರಲ್‌ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 2206 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ನೇರ ನೇಮಕಾತಿಯಾಗಿರುತ್ತದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT