ಎಸ್.ಎಸ್. ರಾಜಮೌಳಿ ನಿರ್ದೇಶನದ, ಜ್ಯೂನಿಯರ್ ಎನ್‌ಟಿಆರ್, ರಾಮ್‌ಚರಣ್ ತೇಜ, ಅಜಯ್ ದೇವ್‌ಗನ್, ಆಲಿಯಾ ಭಟ್ ನಟಿಸಿರುವ ಬಿಗ್‌ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಆರ್‌ಆರ್‌ಆರ್(ರೌದ್ರ–ರಣ–ರುಧಿರ) ಮಾ.18ರಂದು ತೆರೆ ಕಾಣಲಿದೆ.

‘ದೇಶದಲ್ಲಿ ಕೋವಿಡ್ ಪಿಡುಗು ನಿಯಂತ್ರಣಕ್ಕೆ ಬಂದು, ಎಲ್ಲ ಚಿತ್ರಮಂದಿರಗಳಲ್ಲಿ ಶೇ100 ಆಸನ ಭರ್ತಿಗೆ ಅವಕಾಶ ನೀಡಿದರೆ ಮಾ.18ರಂದು ಸಿನಿಮಾ ಬಿಡುಗಡೆಗೆ ನಾವು ಸಿದ್ಧರಿದ್ದೇವೆ. ಇಲ್ಲವಾದಲ್ಲಿ ಏಪ್ರಿಲ್ 28ರಂದು ಸಿನಿಮಾ ಬಿಡುಗಡೆ ಮಾಡುತ್ತೇವೆ’ ಎಂದು ಚಿತ್ರತಂಡವು ತಿಳಿಸಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಹೇರಿಕೆ ಹಾಗೂ ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಆಸನ ಭರ್ತಿಗಷ್ಟೇ ಅವಕಾಶ ನೀಡಲಾಗಿದ್ದ ಕಾರಣ ಜನವರಿ 7ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವನ್ನು ಮುಂದೂಡಲಾಗಿತ್ತು.

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಪ್ಯಾನ್ ಇಂಡಿಯಾ ಸಿನಿಮಾ ಆರ್‌ಆರ್‌ಆರ್(ರೌದ್ರ–ರಣ–ರುಧಿರ) ಮಾ.18ರಂದು ತೆರೆ ಕಾಣಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.