×
ADVERTISEMENT
ಈ ಕ್ಷಣ :
ADVERTISEMENT

ಸಿನಿಮಾ: ‘ನೀ ಸಿಗೋವರೆಗೂ’ ಹುಡುಕಿದ್ದಾರೆ ಶಿವಣ್ಣ

Last Updated 16 ಅಕ್ಟೋಬರ್ 2021, 11:21 IST
Comments
ಅಕ್ಷರ ಗಾತ್ರ

ನಟ ಶಿವರಾಜಕುಮಾರ್ ಅಭಿನಯದ 124ನೇ ಚಿತ್ರ ‘ನೀ ಸಿಗೋವರೆಗೂ’ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಅಮೆರಿಕದಲ್ಲಿ ಚಿತ್ರೀಕರಣ ನಡೆಯಲಿದೆ.

ಶಿವರಾಜ್‌ಕುಮಾರ್‌ ಈ ಚಿತ್ರದಲ್ಲಿ ಸೇನಾಧಿಕಾರಿಯಾಗಿದ್ದಾರೆ. ಈ ಹೊಸ ಲುಕ್ ದಸರಾದಂದು ಅನಾವರಣಗೊಂಡಿದೆ. 

ಭಾವನಾತ್ಮಕ ಪ್ರೇಮಕಥಾಹಂದರದ ಈ ಚಿತ್ರವನ್ನು ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ.

ಮೆರ್ಹಿನ್ ಫಿರ್ಜಾದ ನಾಯಕಿ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್, ಮಂಗ್ಲಿ ತಾರಾಗಣದಲ್ಲಿದ್ದಾರೆ.

‘ಟಗರು’ ಖ್ಯಾತಿಯ ಚರಣ್‌ರಾಜ್‌ ಸಂಗೀತ ನಿರ್ದೇಶನ, ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ನಾರಾಲ ಶ್ರೀನಿವಾಸ್ ರೆಡ್ಡಿ ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಕುಡಿಪುಡಿ ವಿಜಯ್ ಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ನಟ ಶಿವರಾಜಕುಮಾರ್ ಅಭಿನಯದ 124ನೇ ಚಿತ್ರ ‘ನೀ ಸಿಗೋವರೆಗೂ’ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಅಮೆರಿಕದಲ್ಲಿ ಚಿತ್ರೀಕರಣ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT