ಮುಂಬೈ: ರಾಜ್ ಕುಂದ್ರಾ ನನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶೆರ್ಲಿನ್ ಚೋಪ್ರಾ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ತಾವು ದೂರು ದಾಖಲಿಸಿರುವುದಾಗಿ ತಿಳಿಸಿರುವ ಶೆರ್ಲಿನ್, ಪೊಲೀಸರು ಎಫ್‌ಐಆರ್ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಜ್ ಕುಂದ್ರಾ ಹಾಗೂ ಅವರ ಪತ್ನಿ, ನಟಿ ಶಿಲ್ಪಾ ಶೆಟ್ಟಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

2019ರಲ್ಲಿ ಕುಂದ್ರಾ ನನ್ನ ಮ್ಯಾನೇಜರ್ ಅವರನ್ನು ಸಂಪರ್ಕಿಸಿ ಆ್ಯಪ್ ಬ್ಯುಸಿನೆಸ್ ಮಾಡುವ ಪ್ರಸ್ತಾಪ ಮಾಡಿದ್ದರು. ನನಗೆ ಆ ವ್ಯವಹಾರದ ಬಗ್ಗೆ ಇಷ್ಟವಿರಲಿಲ್ಲ, ಹಾಗಾಗಿ ಅದನ್ನು ತಿರಸ್ಕರಿಸಿದ್ದೆ. ಒಂದು ದಿನ ರಾಜ್ ಕುಂದ್ರಾ ನನ್ನ ಅನುಮತಿ ಇಲ್ಲದೇ ಮನೆಗೆ ಬಂದಿದ್ದರು. ಆ ವ್ಯವಹಾರ ಬಗ್ಗೆ ಮತ್ತೆ ಪ್ರಸ್ತಾಪ ಮಾಡಿದರು. ಈ ವೇಳೆ ಇಬ್ಬರ ನಡುವೆ ಮಾತು ಬೆಳೆದಿತ್ತು. ನಂತರ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಶೆರ್ಲಿನ್ ಚೋಪ್ರಾ ಆರೋಪಿಸಿದ್ದಾರೆ.

ನಾನು ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡಿದ ನಂತರ, ಶಿಲ್ಪಾ ಶೆಟ್ಟಿ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ ಕುಂದ್ರಾ ಅವರ ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಶೆರ್ಲಿನ್ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ಆ್ಯಪ್‌ಗಳಿಗಾಗಿ ಅಶ್ಲೀಲ ಚಿತ್ರಗಳನ್ನು ತಯಾರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 19ರಂದು ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್‌ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಅವರನ್ನು ಜಾಮೀನಿನ ಮೇಲೆ ಹೊರಗೆ ಬಿಡಲಾಗಿದೆ. ಕಳೆದ ವರ್ಷ ಆಗಸ್ಟ್ ಮತ್ತು ಡಿಸೆಂಬರ್ ನಡುವೆ ರಾಜ್‌ಕುಂದ್ರಾ ಈ ಉದ್ಯಮದಿಂದ ₹1.17 ಕೋಟಿ ಗಳಿಸಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಇದನ್ನೂ ಓದಿ: ರಾಜ್ ಕುಂದ್ರಾಗೆ ಜಾಮೀನು: ’ಸೂಕ್ತಿ’ಯನ್ನು ಹಂಚಿಕೊಂಡ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ನನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶೆರ್ಲಿನ್ ಚೋಪ್ರಾ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ತಾವು, ದೂರು ದಾಖಲಿಸಿರುವುದಾಗಿ ತಿಳಿಸಿರುವ ಶೆರ್ಲಿನ್, ಪೊಲೀಸರು ಎಫ್‌ಐಆರ್ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.