ಬೆಂಗಳೂರು: ‘ದಿವ್ಯಾ ಸುರೇಶ್ ಸಣ್ಣ ಅಪಘಾತವೊಂದರಲ್ಲಿ ಗಾಯಗೊಂಡಿದ್ದಾರೆ. ಹಾಗಾಗಿ ಕೆಲವು ದಿನಗಳ ಮಟ್ಟಿಗೆ ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವುದಿಲ್ಲ. ಎಲ್ಲರೂ ದಯವಿಟ್ಟು ಸಹಕರಿಸಬೇಕಾಗಿ ಕೋರಿಕೆ...’

ಇದು ನಟಿ, ಬಿಗ್‌ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟವಾದ ಸಂದೇಶ.

ಸೋಮವಾರ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ‘ತುಂಬಾ ದೊಡ್ಡ ಗಾಯವೇನೂ ಆಗಿಲ್ಲ, ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ’ ಎಂದು ಇನ್‌ಸ್ಟಾಗ್ರಾಂ ಪ್ರಕಟಣೆ ತಿಳಿಸಿದೆ.

ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಅವರು, ಇತ್ತೀಚೆಗೆ ಕೆಲವು ಚಿತ್ರಗಳಲ್ಲಿ ನಟಿಸಲು ಮುಂದಾಗಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ಹಲವು ಕಾರ್ಯಕ್ರಮಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

‘ದಿವ್ಯಾ ಸುರೇಶ್ ಸಣ್ಣ ಅಪಘಾತವೊಂದರಲ್ಲಿ ಗಾಯಗೊಂಡಿದ್ದಾರೆ. ಹಾಗಾಗಿ ಕೆಲವು ದಿನಗಳ ಮಟ್ಟಿಗೆ ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವುದಿಲ್ಲ. ಎಲ್ಲರೂ ದಯವಿಟ್ಟು ಸಹಕರಿಸಬೇಕಾಗಿ ಕೋರಿಕೆ...’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.