‘ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಈಗ 136 ರೀಚಾರ್ಜಿಂಗ್ ಕೇಂದ್ರಗಳಿವೆ. ಈ ವರ್ಷ ಹೊಸದಾಗಿ 1,000 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಮುಖ್ಯವಾಗಿ, ಸರ್ಕಾರಿ ಕಚೇರಿಗಳು, ಹೆದ್ದಾರಿಗಳು ಮತ್ತು ಪ್ರವಾಸಿ ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. ನಂತರದ ಹಂತದಲ್ಲಿ ಮಾಲ್‌ಗಳು ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ಕಡ್ಡಾಯವಾಗಿ ಮಾಡಲು ಉದ್ದೇಶಿಸಲಾಗಿದೆ’ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.