×
ADVERTISEMENT
ಈ ಕ್ಷಣ :
ADVERTISEMENT

Test Text story more space issue testing between the para

Sub
Published : 5 ಏಪ್ರಿಲ್ 2024, 6:44 IST
Last Updated : 11 ಏಪ್ರಿಲ್ 2024, 10:25 IST
ಫಾಲೋ ಮಾಡಿ
Comments

7,999 ರೂ. ಬೆಲೆಯಲ್ಲಿ ಹೊಸ Lava Yuva 2 Pro ಸ್ಮಾರ್ಟ್‌ಫೋನ್ ಬಿಡುಗಡೆ!

Lava Yuva 2 Pro ಸ್ಮಾರ್ಟ್‌ಫೋನ್‌ ಫ್ಲಾಶ್‌ಲೈಟ್ ಜೊತೆಗೆ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದ 13 ಮೆಗಾಪಿಕ್ಸೆಲ್ ಲೆನ್ಸ್ ಮತ್ತು ಎರಡು ಹೆಚ್ಚುವರಿ VGA ಕ್ಯಾಮೆರಾಗಳನ್ನು ಒಳಗೊಂಡಿದೆ. ಸೆಲ್ಫಿಗಳಿಗಾಗಿ, ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ.

ದೇಶದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಛಾಪು ಮೂಡಿಸಲು ಪ್ರಯತ್ನಿಸುತ್ತಿರುವ ಜನಪ್ರಿಯ ದೇಶಿಯ ಮೊಬೈಲ್ ಕಂಪೆನಿ Lava ಇದೀಗ ಮತ್ತೊಂದು ಹೊಸ ಬಜೆಟ್ ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಗಮನಸೆಳೆದಿದೆ. Lava ಕಂಪೆನಿಯು ದೇಶದ ಮಾರುಕಟ್ಟೆಗೆ ಸದ್ದಿಲ್ಲದಂತೆ ತನ್ನ ವಿನೂತನ Lava Yuva 2 Pro ಸ್ಮಾರ್ಟ್‌ಫೋನನ್ನು ಪರಿಚಯಿಸಿದ್ದು, ಇದು ಆಕ್ಟಾ ಕೋರ್‌ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 13MP ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಹಲವಾರು ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಹಾಗಾದರೆ, Lava ಪರಿಚಯಿಸಿರುವ ನೂತನ Lava Yuva 2 Pro ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಇದರ ವೈಶಿಷ್ಟ್ಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ

ನೂತನ Lava Yuva 2 Pro ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ನಾಚ್ ಡಿಸ್‌ಪ್ಲೇಯೊಂದಿಗೆ ಬಿಡುಗಡೆಯಾಗಿದೆ. 720x1600 ರೆಸಲ್ಯೂಶನ್‌ ಸಾಮರ್ಥ್ಯದ ಇದರ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್‌ ಮತ್ತು 269ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಪ್ರೊಸೆಸರ್ ವಿಭಾಗದಲ್ಲಿ, 4GB RAM ಮತ್ತು 64GB ಸ್ಟೋರೇಜ್ ಜೊತೆಗೆ ಜೋಡಿಸಲಾದ ಆಕ್ಟಾ ಕೋರ್‌ MediaTek Helio G37 ಚಿಪ್‌ಸೆಟ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಕಂಪೆನಿ ತಿಳಿಸಿದೆ. ಹಾಗೂ ಈ ಸ್ಮಾರ್ಟ್‌ಫೋನಿನಲ್ಲಿ 3GB ವರ್ಚುವಲ್ RAM ವಿಸ್ತರಣೆ ಅವಕಾಶವಿದೆ ಮತ್ತು ಸ್ಮಾರ್ಟ್‌ಫೋನಿನ ಆಂತರಿಕ ಮೆಮೊರಿಯನ್ನು ಎಸ್‌ಡಿ ಕಾರ್ಡ್‌ ಸಹಾಯದಿಂದ 256GB ವರೆಗೂ ವಿಸ್ತರಿಸಲು ಸಾಧ್ಯವಾಗಲಿದೆ ಎಂದು ಕಂಪೆನಿಯು ಹೇಳಿದೆ.

ಮೊದಲೇ ಹೇಳಿದಂತೆ, ಹೊಸ Lava Yuva 2 Pro ಸ್ಮಾರ್ಟ್‌ಫೋನ್‌ ದೇಶದಲ್ಲಿ 7,999 ರೂ. ಬೆಲೆಯಲ್ಲಿ ಪರಿಚಯಿಸಲಾಗಿದೆ.. ಗ್ರಾಹಕರು ಏಕೈಕ 4GB RAM + 64GB ಸಾಮರ್ಥ್ಯದಲ್ಲಿ Lava Yuva 2 Pro ಸ್ಮಾರ್ಟ್‌ಫೋನ್ ಖರೀದಿಸಲು ಅವಕಾಶವಿದೆ. ಆದರೆ, ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು Lava ಆನ್‌ಲೈನ್ ಸ್ಟೋರ್, ಪ್ರಮುಖ ರಿಟೇಲ್ ಸ್ಟೋರ್‌ಗಳು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಈ ಸ್ಮಾರ್ಟ್‌ಫೋನ್ ಮಾರಾಟಕ್ಕೆ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT