×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ

Published : 20 ಜನವರಿ 2022, 19:36 IST
ಫಾಲೋ ಮಾಡಿ
Comments

ಕೆ.ಆರ್.ಪುರ: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ– ಬಿಟಿ ಮತ್ತು ಕೌಶಲ ಅಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಕೆ.ಆರ್.ಪುರ ಸಮೀಪದ ಗರುಡಚಾರಪಾಳ್ಯದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ ’ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರ ಚಾಲನೆ ನೀಡಿ ಮಾತನಾಡಿದರು.

’ಡಿಜಿಟಲ್ ಮಾಧ್ಯಮ ಮನೋರಂಜನಾ ಪ್ರದೇಶ’ವನ್ನು ಕೂಡ ಇನ್ನು ಒಂದು ವರ್ಷದಲ್ಲಿ ಮಹದೇವಪುರದ ಸಮೀಪ ಸ್ಥಾಪಿಸಲಾಗುವುದು. ಇದಕ್ಕೆ ಅಗತ್ಯ ಭೂಮಿ ಗುರುತಿಸುವಂತೆ ಕೈಗಾರಿಕಾ ಇಲಾಖೆಗೆ ಹೇಳಲಾಗುವುದು ಎಂದರು.

ಶಾಸಕ ಅರವಿಂದ ಲಿಂಬಾವಳಿ, ’ಎವಿಜಿಸಿ ಕೇಂದ್ರವು ಏಷ್ಯಾದ ಅತ್ಯಂತ ವಿಸ್ತೃತ ಮತ್ತು ಆಧುನಿಕ ಪ್ರಯೋಗಾಲಯ ಮತ್ತು ತರಬೇತಿ ಕೇಂದ್ರವಾಗಿದ್ದು, ಇಲ್ಲಿ ಆಡಿಯೋ ವೀಡಿಯೋ ತಂತ್ರಜ್ಞಾನ, ಮೋಷನ್ ಕ್ಯಾಪ್ಚರ್ ತಂತ್ರಜ್ಞಾನ, 3ಡಿ ಸ್ಕ್ಯಾನ್ ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳು ಲಭ್ಯವಿದೆ‘ ಎಂದರು.

ಪ್ರಜಾವಾಣಿ ವಾರ್ತೆ ಕೆ.ಆರ್.ಪುರ: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಕೆ.ಆರ್.ಪುರ ಸಮೀಪದ ಗರುಡಚಾರಪಾಳ್ಯದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT