×
ADVERTISEMENT
ಈ ಕ್ಷಣ :
ADVERTISEMENT

COVID-19 India Updates: 10,753 ಹೊಸ ಪ್ರಕರಣ, 27 ಸಾವು

ಒಂದೇ ದಿನ 27 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,091ಕ್ಕೆ ಏರಿದೆ.
Published : 15 ಏಪ್ರಿಲ್ 2023, 6:38 IST
Last Updated : 15 ಏಪ್ರಿಲ್ 2023, 6:38 IST
ಫಾಲೋ ಮಾಡಿ
Comments

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 10,753 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಒಂದೇ ದಿನ 27 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,091ಕ್ಕೆ ಏರಿದೆ.

ದೆಹಲಿ, ಕೇರಳದಲ್ಲಿ ತಲಾ 6, ಮಹಾರಾಷ್ಟ್ರದಲ್ಲಿ 4, ರಾಜಸ್ಥಾನದಲ್ಲಿ 3 ಹಾಗೂ ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಉತ್ತರಾಖಂಡ, ಉತ್ತರಪ್ರದೇಶದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 6.78ರಷ್ಟಿದ್ದು, ವಾರದ ಪಾಸಿಟಿವಿಟ ದರ ಶೇಕಡ 4.49ರಷ್ಟಿದೆ.

ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.48 ಕೋಟಿ (4,48,08,022) ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT