×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾ: ಮಲ್ಕನ್‌ಗಿರಿ ಅರಣ್ಯದಲ್ಲಿ ಮೂವರು ಮಾವೊವಾದಿಗಳ ಹತ್ಯೆ

Published : 12 ಅಕ್ಟೋಬರ್ 2021, 10:54 IST
ಫಾಲೋ ಮಾಡಿ
Comments

ಭುವನೇಶ್ವರ: ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ತುಳಸಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಶಂಕಿತ ಮಾವೊವಾದಿಗಳು ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಗುಪ್ತಚರ ಮಾಹಿತಿ ಆಧರಿಸಿ ವಿಶೇಷ ಕಾರ್ಯಾಚರಣೆ ತಂಡ ಮತ್ತು ಮಲ್ಕನ್‌ಗಿರಿ ಜಿಲ್ಲಾ ಸ್ವಯಂ ಸೇವಾ ಪಡೆಯವರು ಜಂಟಿಯಾಗಿ ಅರಣ್ಯ ಪ್ರದೇಶದಲ್ಲಿ  ಶೋಧಕಾರ್ಯ ಕೈಗೊಂಡರು ಎಂದು ಡಿಜಪಿ ಅಭಯ್‌ ತಿಳಿಸಿದರು.

ಒಡಿಶಾ ಮತ್ತು ಆಂಧ್ರಪ್ರದೇಶ ಗಡಿಭಾಗದ ಕೆರಿಮಿಟಿ ಹಳ್ಳಿಯ ಸಮೀಪದ ಅರಣ್ಯ ಪ್ರದೇಶದಲ್ಲಿ ಯೋಧರು ಕಾರ್ಯಾಚರಣೆ ನಡೆಸುತ್ತಿರುವುದನ್ನು ಖಚಿತಪಡಿಸಿಕೊಂಡ ಮಾವೊವಾದಿಗಳು, ಅವರ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ಪ್ರತಿ ಗುಂಡಿನ ದಾಳಿ ನಡೆಸಿದರು. ಈ ಸಂಘರ್ಷದಲ್ಲಿ ಮೂವರು ಮಾವೊವಾದಿಗಳು ಸ್ಥಳದಲ್ಲೇ ಮೃತಪಟ್ಟರು ಎಂದು ಅವರು ತಿಳಿಸಿದರು. 

’ಈ ಅರಣ್ಯ ಪ್ರದೇಶದಲ್ಲಿ ಇನ್ನೂ 30 ರಿಂದ 40 ಮಂದಿ ನಕ್ಸಲರಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಡಿಜಿಪಿ ತಿಳಿಸಿದರು.

ಒಡಿಶಾದಲ್ಲಿ 2020ರಲ್ಲಿ ನಿಷೇಧಿತ ಸಿಪಿಐ(ಮಾವೊವಾದಿ)ನ 16 ಸದಸ್ಯರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದವು. ಈ ಸಂಘರ್ಷದಲ್ಲಿ ಏಳು ನಾಗರಿಕರು ಮತ್ತು ಇಬ್ಬರು ಪೊಲೀಸರು  ಹತರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದರು.

ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ತುಳಸಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಶಂಕಿತ ಮಾವೊವಾದಿಗಳು ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT