×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ: ಬಿಜೆಪಿಯಿಂದ ಅಯೋಧ್ಯೆ, ಕಾಶಿ ಮತ್ತು ಮಥುರಾ ಒಳಗೊಂಡ ಚುನಾವಣಾ ಹಾಡು

ಫಾಲೋ ಮಾಡಿ
Comments

ನವದೆಹಲಿ: ಉತ್ತರ ಪ್ರದೇಶದಲ್ಲಿ ಸತತ ಎರಡನೇ ಬಾರಿಗೆ ಸರ್ಕಾರ ರಚಿಸುವ ಗುರಿಯನ್ನು ಹೊಂದಿರುವ ಬಿಜೆಪಿ ಹಿಂದುತ್ವದ ಅಜೆಂಡಾದೊಂದಿಗೆ ಅಯೋಧ್ಯೆ, ಕಾಶಿ ಮತ್ತು ಮಥುರಾವನ್ನು ಕೇಂದ್ರೀಕರಿಸಿರುವ ಹಾಡಿನೊಂದಿಗೆ (ಥೀಮ್ ಸಾಂಗ್) ಚುನಾವಣಾ ಪ್ರಚಾರ ಆರಂಭಿಸಿದೆ.

ಅಯೋಧ್ಯೆ, ಕಾಶಿ ಮತ್ತು ಮಥುರಾವನ್ನು ಉಲ್ಲೇಖಿಸುವ ಚುನಾವಣಾ ಪ್ರಚಾರದ ಹಾಡನ್ನು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.

ಈ ಥೀಮ್ ಹಾಡಿನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಕಾಶಿ ವಿಶ್ವನಾಥ ಪುನರಾಭಿವೃದ್ಧಿ ಮತ್ತು ಮುಂದಿನ ದಿನಗಳಲ್ಲಿ ಮಥುರಾ ಏನಾಗಲಿದೆ ಎಂಬುದರ ಕುರಿತು ವಿವರಿಸಲಾಗಿದೆ. ಈ ಪ್ರಚಾರದ ಹಾಡು ಕೇಸರಿ ಪಾಳಯದ ಪ್ರಚಾರದಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿದ್ದು, ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಎಲ್ಲ ಕಸರತ್ತಿನ ಮೂಲಕ ಮತದಾರರನ್ನು ತಲುಪುವ ಮತ್ತು ಚುನಾವಣಾ ಪ್ರಚಾರದ ಹಾಡಿನ ಮೂಲಕ ಅವರನ್ನು ಓಲೈಸುವ ಗುರಿಯನ್ನು ಹೊಂದಿದೆ.

ಅಯೋಧ್ಯೆಯ ರಾಮ ಮಂದಿರದ ಭವ್ಯ ಮಾದರಿ, ದೇಗುಲಗಳ ನಗರಿಯಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯಕ್ರಮಗಳನ್ನು ಈ ವಿಡಿಯೊ ಒಳಗೊಂಡಿದೆ. ಅಲ್ಲದೆ, ವಾರಾಣಸಿಗೆ ಮೋದಿ ಮತ್ತು ಆದಿತ್ಯನಾಥ್ ಅವರ ಭೇಟಿ ಮತ್ತು ಮಥುರಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್ ಅವರ ರೋಡ್ ಶೋಗಳನ್ನು ಸಹ ವಿಡಿಯೊದಲ್ಲಿ ತೋರಿಸಲಾಗಿದೆ.

ರಾಜ್ಯದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನೂ ಒಳಗೊಂಡಿದೆ.

ಸಂಪುಟ ಸಚಿವ ಗಿರಿರಾಜ್ ಸಿಂಗ್, ಪಕ್ಷದ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಮತ್ತು ಇತರ ಪಕ್ಷದ ಸಂಸದರು ಮತ್ತು ಮುಖಂಡರು ಹಾಡನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಸತತ ಎರಡನೇ ಬಾರಿಗೆ ಸರ್ಕಾರ ರಚಿಸುವ ಗುರಿಯನ್ನು ಹೊಂದಿರುವ ಬಿಜೆಪಿ ಹಿಂದುತ್ವದ ಅಜೆಂಡಾದೊಂದಿಗೆ ಅಯೋಧ್ಯೆ, ಕಾಶಿ ಮತ್ತು ಮಥುರಾವನ್ನು ಕೇಂದ್ರೀಕರಿಸಿರುವ ಹಾಡಿನೊಂದಿಗೆ (ಥೀಮ್ ಸಾಂಗ್) ಚುನಾವಣಾ ಪ್ರಚಾರ ಆರಂಭಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT