ಚಂಡೀಗಡ: ಪಂಜಾಬ್‌ನಲ್ಲಿ ಫೆಬ್ರುವರಿ 14ಕ್ಕೆ ನಿಗದಿಯಾಗಿರುವ ವಿಧಾನಸಭೆ ಕ್ಷೇತ್ರಗಳ ಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ (ಸಂಯುಕ್ತ) ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ. ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಬಿಎಸ್‌ಪಿ ಮತ್ತು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಸಹ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.