ನವದೆಹಲಿ: ಪೂರ್ವ ದೆಹಲಿಯ ತ್ರಿಲೋಕಪುರಿಯಲ್ಲಿ ಇಂದು ಮಧ್ಯಾಹ್ನ ಎರಡು ಅನುಮಾನಾಸ್ಪದ ಬ್ಯಾಗ್‌ಗಳು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಬಾಂಬ್ ಭೀತಿ ಉಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಬ್ಯಾಗ್‌ಗಳ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದ ಕೂಡಲೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ತ್ರಿಲೋಕಪುರಿ ಬ್ಲಾಕ್ -15ರ ಮೆಟ್ರೋ ಪಿಲ್ಲರ್ ಸಂಖ್ಯೆ 59ರ ಬಳಿ ಎರಡು ಬ್ಯಾಗ್‌ಗಳು ಇರುವ ಬಗ್ಗೆ ಮಧ್ಯಾಹ್ನ 1 ಗಂಟೆಗೆ ಅವರಿಗೆ ಕರೆ ಬಂದಿತು.

ಕಳೆದ ವಾರ, ಗಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಚೀಲದಲ್ಲಿ ಆರ್‌ಡಿಎಕ್ಸ್ ಮತ್ತು ಅಮೋನಿಯಂ ನೈಟ್ರೇಟ್ ತುಂಬಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು.

ಸ್ಫೋಟಕವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ಇರಿಸಲಾಗಿತ್ತು. ನಂತರ ಐಇಡಿಯನ್ನು ನಿಯಂತ್ರಿತ ಸ್ಫೋಟ ತಂತ್ರವನ್ನು ಬಳಸಿ 8 ಅಡಿಯ ಗುಂಡಿಯಲ್ಲಿ ಇಳಿಸಿ ಸ್ಫೋಟಿಸುವ ಮೂಲಕ ನಾಶಪಡಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.