×
ADVERTISEMENT
ಈ ಕ್ಷಣ :
ADVERTISEMENT

12 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ: ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಅರ್ಜಿ

Published : 17 ಜನವರಿ 2022, 11:59 IST
ಫಾಲೋ ಮಾಡಿ
Comments

ನವದೆಹಲಿ: 12 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲು ಮಾರ್ಗದರ್ಶಿ ಸೂತ್ರಗಳ ವಿವರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಸೋಮವಾರ ಮನವಿಯೊಂದು ಸಲ್ಲಿಕೆಯಾಗಿದೆ. 

ಈ ಅರ್ಜಿಯನ್ನು ಮಾರ್ಚ್‌ 22 ರಂದು ಆಲಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರ ಪೀಠ ಹೇಳಿದೆ. 

12 ವರ್ಷದ ಒಬ್ಬ ಬಾಲಕಿ ಮತ್ತು ಮತ್ತೊಬ್ಬರು ಈ ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ 15-17 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಕೈಲಾಶ್‌ ವಾಸುದೇವ್‌ ಹೇಳಿದರು.

12 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಕೇಂದ್ರ ಸರ್ಕಾರ ಯಾವುದೇ ಮಾರ್ಗಸೂಚಿಗಳನ್ನು ನೀಡಿಲ್ಲ. ಆದ್ದರಿಂದ ನ್ಯಾಯಾಲಯ ಈ ಕುರಿತು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಕೀಲ ಕೈಲಾಶ್‌ ಹೈಕೋರ್ಟ್‌ಗೆ ತಿಳಿಸಿದರು. 

12 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲು ಮಾರ್ಗರ್ಶಿ ಸೂತ್ರಗಳ ನೀಲನಕ್ಷೆಯೊಂದನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಸೋಮವಾರ ಮನವಿಯೊಂದು ಸಲ್ಲಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT