×
ADVERTISEMENT
ಈ ಕ್ಷಣ :
ADVERTISEMENT

ಡ್ರಗ್ಸ್‌ ಪ್ರಕರಣ: ಆರ್ಯನ್ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸಲು ಎನ್‌ಸಿಬಿಗೆ ಸೂಚನೆ

ಫಾಲೋ ಮಾಡಿ
Comments

ಮುಂಬೈ: ಇಲ್ಲಿನ ಕರಾವಳಿಯಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿ, ಡ್ರಗ್ಸ್‌ ಸೇವನೆ ಆರೋಪದ ಮೇಲೆ ಬಂಧಿಸಲಾಗಿರುವ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಮಾದಕವಸ್ತು ನಿಯಂತ್ರಣ ಸಂಸ್ಥೆಗೆ (ಎನ್‌ಸಿಬಿ) ಸೋಮವಾರ ತಿಳಿಸಿದೆ.

ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್‌ (ಎನ್‌ಡಿಪಿಎಸ್‌) ಕಾಯ್ದೆಅಡಿ  ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿ.ವಿ.ಪಾಟೀಲ್ ಅವರು, ಬುಧವಾರ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ಎನ್‌ಸಿಬಿಗೆ ತಿಳಿಸಿದರು.

ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅವರನ್ನು ಅ.3 ರಂದು ಬಂಧಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.  ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇಲ್ಲಿನ ಕರಾವಳಿಯಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿ, ಡ್ರಗ್ಸ್‌ ಸೇವನೆ ಆರೋಪದ ಮೇಲೆ ಬಂಧಿಸಲಾಗಿರುವ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ)ಗೆ ಸೋಮವಾರ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT