×
ADVERTISEMENT
ಈ ಕ್ಷಣ :
ADVERTISEMENT

ದೇಶದಾದ್ಯಂತ 95 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಣೆ

ನವದೆಹಲಿ: ದೇಶದಾದ್ಯಂತ ಇದುವರೆಗೆ ಒಟ್ಟು 95 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

Co-WIN ಪೋರ್ಟಲ್‌ನಲ್ಲಿನ ಅಂಕಿ-ಅಂಶದ ಪ್ರಕಾರ, ಭಾನುವಾರ ಒಂದೇದಿನ ಸಂಜೆ 7ರ ವರೆಗೆ ಒಟ್ಟು 44 ಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ.

ದೇಶದಾದ್ಯಂತ ಜನವರಿ 16 ರಿಂದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸುವ ಮೂಲಕ ಅಭಿಯಾನ ಆರಂಭಿಸಲಾಯಿತು. ಫೆಬ್ರುವರಿ 2ರ ಬಳಿಕ ಮುಂಚೂಣಿ ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡಲಾಗಿತ್ತು.

ಮಾರ್ಚ್‌ 1ರಿಂದ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್‌ 1ರ ಬಳಿಕ 45 ವರ್ಷ ಮೇಲಿನವರಿಗೆ ಲಸಿಕೆ ವಿತರಿಸಲಾಯಿತು.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರವು ಅಭಿಯಾನವನ್ನು ವಿಸ್ತರಿಸಿತ್ತು. 

ದೇಶದಾದ್ಯಂತ ಇದುವರೆಗೆ ಒಟ್ಟು 95 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT