ನವದೆಹಲಿ: ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ವಿ.ಡಿ. ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿಯ ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಮಂಗಳವಾರ ನಡೆದ ಸಾವರ್ಕರ್ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಮಾತನಾಡಿದರು.

ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರಗಳನ್ನು ಬರೆದ ಬಗ್ಗೆ ಸುಳ್ಳುಗಳನ್ನು ಪ್ರಚಾರ ಮಾಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ. ಹೀಗೆ ದಾರಿ ತಪ್ಪಿಸುತ್ತಿರುವವರಿಗೆ ಕ್ಷಮಾಪಣೆ ಪತ್ರಗಳನ್ನು ಬರೆಯಲು ಸಲಹೆ ನೀಡಿದ್ದು ಮಹಾತ್ಮ ಗಾಂಧಿ ಎಂಬುದು ಗೊತ್ತಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದರು.

ಸಾವರ್ಕರ್ ವಿರುದ್ಧ ಸಾಕಷ್ಟು ಅಪಪ್ರಚಾರ ನಡೆದಿದೆ. ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರವನ್ನು ಬರೆದರು ಎಂಬುದನ್ನು ಸಾಕಷ್ಟು ಸಲ ಹೇಳಲಾಗಿದೆ. ಸತ್ಯ ಏನೆಂದರೆ ಸಾವರ್ಕರ್ ಬಿಡುಗಡೆ ಬಯಸಿ ಕ್ಷಮಾಪಣೆ ಪತ್ರಗಳನ್ನು ಬರೆಯಲಿಲ್ಲ. ಸಾಮಾನ್ಯವಾಗಿ ಒಬ್ಬ ಕೈದಿಗೆ ಕ್ಷಮಾಪಣೆ ಪತ್ರ ಬರೆಯುವ ಹಕ್ಕು ಇದೆ. ಮಹಾತ್ಮ ಗಾಂಧಿ ಅವರು ಕ್ಷಮಾಪಣೆ ಪತ್ರ ಬರೆಯುವಂತೆ ಸಾವರ್ಕರ್ ಅವರಿಗೆ ಸೂಚಿಸಿದರು. ನಂತರ ಸಾವರ್ಕರ್ ಅವರನ್ನು ಬಿಡುಗಡೆ ಮಾಡುವಂತೆ ಗಾಂಧಿ ಮನವಿ ಮಾಡಿದ್ದರು. ಸ್ವಾತಂತ್ರ್ಯ ಚಳುವಳಿಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಗಾಂಧಿ ಹೇಳಿದ್ದರು. ಅದರಂತೆ ಸಾವರ್ಕರ್ ನಡೆದುಕೊಂಡರು ಎಂದು ರಾಜನಾಥ್ ಸಿಂಗ್ ತಿಳಿಸಿದರು.

ಸಾವರ್ಕರ್ ಟೀಕಾಕಾರರ ಮುಂದಿನ ಗುರಿ ಸ್ವಾಮಿ ವಿವೇಕಾನಂದ: ಮೋಹನ್ ಭಾಗವತ್

ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ವಿ.ಡಿ. ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.