ಬೆಂಗಳೂರು: ಪಂಚರಾಜ್ಯ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಮತ್ತು ಪಟ್ಟಿ ಬಿಡುಗಡೆ ಮುಂತಾದ ಕೆಲಸಗಳು ಭರದಿಂದ ಸಾಗಿವೆ.

ಗೋವಾ ಮತ್ತು ಉತ್ತರಾಖಂಡ ಚುನಾವಣೆಗೆ ಬಿಜೆಪಿ, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಚುನಾವಣೆ ಸಂಬಂಧ ದೆಹಲಿಗೆ ತೆರಳಿ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

40 ಮಂದಿ ಸದಸ್ಯಬಲದ ಗೋವಾ ವಿಧಾನಸಭೆ ಮತ್ತು 70 ಮಂದಿ ಸದಸ್ಯಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರುವರಿ 14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಗೋವಾದಲ್ಲಿ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್–ಟಿಎಂಸಿ ಟ್ವಿಟರ್ ಜಗಳ

ಬಿಜೆಪಿಯಿಂದ ಸ್ಪರ್ಧಿಸಲಿರುವ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಂಬಂಧಿಸಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಪಕ್ಷದ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರದಲ್ಲಿ ಅಭ್ಯರ್ಥಿ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿದುಬಂದಿದೆ.

Punjab Elections: ಕಾಂಗ್ರೆಸ್ನ ಮೊದಲ ಪಟ್ಟಿ ಪ್ರಕಟ- ಸಿಧು ಕ್ಷೇತ್ರ ಯಾವುದು?

ಗೋವಾ ಮತ್ತು ಉತ್ತರಾಖಂಡ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.