ಪಣಜಿ: ಸಂವೋರ್ಡೆಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ ಗೋವಾದ ಲೋಕೋಪಯೋಗಿ ಇಲಾಖೆ ಸಚಿವ ದೀಪಕ್ ಪ್ರಭು ಪೌಸ್ಕರ್ ಶುಕ್ರವಾರ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

2019 ರಲ್ಲಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಪೌಸ್ಕರ್, ತಮ್ಮ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

'ನಾನು ಇಂದು ಶಾಸಕ ಹಾಗೂ ಸಚಿವ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ... ನನ್ನ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ಸಂವೋರ್ಡೆಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಪೌಸ್ಕರ್ ಹೇಳಿದ್ದಾರೆ.

ಗುರುವಾರ 34 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ, ಮಾಜಿ ಶಾಸಕ ಗಣೇಶ್ ಗಾಂವ್ಕರ್ ಅವರಿಗೆ ಸಂವೋರ್ಡೆಮ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಸಂವೋರ್ಡೆಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ ಗೋವಾದ ಲೋಕೋಪಯೋಗಿ ಇಲಾಖೆ ಸಚಿವ ದೀಪಕ್ ಪ್ರಭು ಪೌಸ್ಕರ್ ಶುಕ್ರವಾರ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.