×
ADVERTISEMENT
ಈ ಕ್ಷಣ :
ADVERTISEMENT

ಕೇರಳ: ಭಾರಿ ಮಳೆಗೆ ಕಟ್ಟಡ ಕುಸಿದು ಇಬ್ಬರು ಮಕ್ಕಳ ಸಾವು

Published : 12 ಅಕ್ಟೋಬರ್ 2021, 7:19 IST
ಫಾಲೋ ಮಾಡಿ
Comments

ಮಲಪ್ಪುರಂ (ಕೇರಳ): ಕೇರಳದ ವಿವಿಧ ಕಡೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಂಗಳವಾರ ಮುಂಜಾನೆ ಮಲಪ್ಪುರಂ ಜಿಲ್ಲೆಯ ಕರಿಪುರದಲ್ಲಿ ಮನೆಯೊಂದು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಆರು ತಿಂಗಳ ಮಗು ಮತ್ತು ಆಕೆಯ ಸಹೋದರಿ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಕ್ಕಳು, ಮುಂಡೋಟ್ಟುಪದಮ್ ಸಮೀಪದ ಮಠಮ್‌ಕುಲಂನಲ್ಲಿನ ತನ್ನ ಅಜ್ಜನ ಮನೆಯಲ್ಲಿ ವಾಸವಿದ್ದರು. ಅದೇ ಕಟ್ಟಡ ಈಗ ಮಳೆಗೆ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.   

ಸ್ಥಳೀಯ ಮೂಲಗಳ ಪ್ರಕಾರ, ’ಮುಂಜಾನೆ 4.30ರ ಸುಮಾರಿಗೆ ಸುರಿದ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಈ ಸಂತ್ರಸ್ತ ಕುಟುಂಬದ ನಿವಾಸದ ಮೇಲೆ ಕುಸಿದಿದೆ. ಪರಿಣಾಮವಾಗಿ ಮನೆಯೊಳಗಿದ್ದ ಮಕ್ಕಳು ತೀವ್ರವಾಗಿ ಗಾಯಗೊಂಡಿವೆ. ತಕ್ಷಣ ಅವರನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಮಕ್ಕಳು ಮೃತಪಟ್ಟಿವೆ.

ಕೇರಳದಾದ್ಯಂತ ಸೋಮವಾರದಿಂದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳವಾರವೂ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದ ವಿವಿಧ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಂಗಳವಾರ ಮುಂಜಾನೆ ಮಲಪ್ಪುರಂ ಜಿಲ್ಲೆಯ ಕರಿಪುರದಲ್ಲಿ ಮನೆಯೊಂದು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT