×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: ಭಾರಿ ಮಳೆ, ಜನ ಜೀವನ ಅಸ್ತವ್ಯಸ್ತ

Published : 17 ಅಕ್ಟೋಬರ್ 2021, 11:02 IST
ಫಾಲೋ ಮಾಡಿ
Comments

ನವದೆಹಲಿ (ಪಿಟಿಐ): ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದ್ದು, ನಗರದ ವಿವಿಧೆಡೆ ರಸ್ತೆಯಲ್ಲಿಯೇ ನೀರು ನಿಂತು ಸಂಚಾರ ದಟ್ಟಣೆ ಉಂಟಾಯಿತು. ವಾಹನ ಸವಾರರು ಪರದಾಡಿದರು. 

ಪಶ್ಚಿಮದಲ್ಲಿ ಉಂಟಾಗಿರುವ ಹವಾಮಾನ ಏರುಪೇರಿನ ಪರಿಣಾಮ ಅಕಾಲಿಕ ಮಳೆಗೆ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಐಎಂಡಿ) ಹೇಳಿದೆ. ದೆಹಲಿ ಹಾಗೂ ಉತ್ತರ ಪ್ರದೇಶ ಮತ್ತು ಹರಿಯಾಣದ ಪಶ್ಚಿಮ ಭಾಗದಲ್ಲಿ ಮಳೆಯಾಗಿದೆ.

ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು ಹಗುರದಿಂದ ಸಾಧಾರಣ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಭಾನುವಾರ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ದೆಹಲಿಯ ವಿವಧೆಡೆ ಮತ್ತು  ಉತ್ತರ ಪ್ರದೇಶ ಮತ್ತು ಹರಿಯಾಣದ ರೇವಾರಿ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಮುಂದುವರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಭಾನುವಾರದಂದು ಕನಿಷ್ಠ ತಾಪಮಾನ 23.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದೂ ಅದು ಹೇಳಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಹಲವು ಭಾಗಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT