×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಸೈನಿಕರಿಬ್ಬರು ಹುತಾತ್ಮ

Published : 15 ಅಕ್ಟೋಬರ್ 2021, 4:56 IST
ಫಾಲೋ ಮಾಡಿ
Comments

ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ’ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ರೈಫಲ್ ಮೆನ್ ವಿಕ್ರಮ್ ಸಿಂಗ್ ನೇಗಿ (26) ಮತ್ತು ಯೋಗಂಬರ್ ಸಿಂಗ್ (27) ಹುತಾತ್ಮರಾದವರು. ಪೂಂಚ್ ಜಿಲ್ಲೆಯ ಮೆಂಧಾರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

‘ಮೆಂಧಾರ್ ಉಪ ವಿಭಾಗದ ನರ್‌ಖಾಸ್‌ ಅರಣ್ಯದ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಗುರುವಾರ ಸಂಜೆ ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸೈನಿಕರು ಸಾವಿಗೀಡಾದರು’ ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದರು.

ಕರ್ತವ್ಯದ ವೇಳೆ ಇಬ್ಬರೂ ತೋರಿದ ಧೈರ್ಯ ಅಸಾಧಾರಣವಾದದ್ದು. ಅವರ ಸರ್ವೋಚ್ಛ ತ್ಯಾಗಕ್ಕಾಗಿ ದೇಶವು ಅವರಿಗೆ ಎಂದಿಗೂ ಋಣಿಯಾಗಿರುತ್ತದೆ ’ ಎಂದು ಅವರು ತಿಳಿಸಿದ್ದಾರೆ.

ಸೇನೆಯ ನಿಯೋಜಿತ ಕಿರಿಯ ಅಧಿಕಾರಿಯೊಬ್ಬರು ಕಾಣೆಯಾಗಿದ್ದು, ಅವರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಪೂಂಚ್‌ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಯೊಬ್ಬರು (ಜೂನಿಯರ್ ಕಮಿಷನ್ಡ್‌ ಆಫೀಸರ್‌– ಜೆಸಿಒ) ಸೇರಿದಂತೆ ಸೇನಾಪಡೆಯ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT