ರಾಮಗಢ: ಜಿಲ್ಲಾ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್ ನಾರಾಯಣ ಶರ್ಮಾ (60) ಎಂಬುವವರನ್ನು ಅವರ ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಿಟಕಿ ಮೂಲಕ ಮನೆಯ ಒಳಗೆ ಪ್ರವೇಶಿಸಿರುವ ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಶರ್ಮಾ ಅವರನ್ನು ಕೊಲೆ ಮಾಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಶರ್ಮಾ ಅವರ ಹೆಂಡತಿ ಚಂಚಲಾ ಶರ್ಮಾ ಅವರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

55 ವರ್ಷದ ಚಂಚಲಾ ಅವರನ್ನು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಆರ್‌ಐಎಂಎಸ್-ರಿಮ್ಸ್) ದಾಖಲಿಸಲಾಗಿದೆ.

ಎಲ್ಲ ಆಯಾಮದಲ್ಲೂ ಪ್ರಕರಣದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರೊಂದಿಗೆ ಮಾತನಾಡುವುದಾಗಿ ಹಾಗೂ ಸಿಐಡಿ ತನಿಖೆಗೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ʼಕ್ರೂರ ಹತ್ಯೆಯನ್ನು ಖಂಡಿಸುತ್ತೇನೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿ, ತಕ್ಕ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುತ್ತೇನೆʼ ಎಂದಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್ ನಾರಾಯಣ ಶರ್ಮಾ (60) ಎಂಬುವವರನ್ನು ಅವರ ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.