ಲಖಿಂಪುರ ಖೇರಿ(ಉತ್ತರ ಪ್ರದೇಶ): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಅವರನ್ನು ಮಂಗಳವಾರ ವಿಚಾರಣೆಗಾಗಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆತರಲಾಯಿತು.

ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಚಿಂತರಾಮ್ ಅವರು ಸೋಮವಾರ ಆಶಿಷ್ ಅವರನ್ನು ವಿಚಾರಣೆಗಾಗಿ ಮೂರು ದಿನಗಳ ಪೊಲೀಸ್ ವಶಕ್ಕೆ ನೀಡಿದ ಒಂದು ದಿನದ ನಂತರ, ಮಂಗಳವಾರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕ್ರೈ ಬ್ರಾಂಚ್ ಕಚೇರಿಗೆ ಕರೆತರಲಾಗಿದೆ.

ಲಖಿಂಪುರ ಖೇರಿಯಲ್ಲಿ ಅ.3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಆಶಿಷ್ ಅವರನ್ನು ಬಂಧಿಸಲಾಗಿತ್ತು.

ಪೊಲೀಸರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿದ್ದರು. ಆದರೆ ನ್ಯಾಯಾಲಯ ಅ.12ರಿಂದ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿತು. ಅ.15ಕ್ಕೆ ಆ ಅವಧಿ ಮುಗಿಯಲಿದೆ ಎಂದು ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಒ) ಎಸ್ ಪಿ ಯಾದವ್ ಸುದ್ದಿಗಾರರಿಗೆ ತಿಳಿಸಿದರು.

ಆಶಿಷ್‌ರನ್ನು ಶನಿವಾರ ಬಂಧಿಸುವ ಮುನ್ನ ಕ್ರೈಂ ಬ್ರಾಂಚ್ ಕಚೇರಿಯಲ್ಲಿ 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಈಗ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಮುಂದೆ ಈ ತಂಡ ಆಶಿಷ್ ಅವರ ವಿಚಾರಣೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಅವರನ್ನು ಮಂಗಳವಾರ ವಿಚಾರಣೆಗಾಗಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆತರಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.