×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳಿಗೆ ಸಿಕ್ಕಿಬಿದ್ದ ಎಲ್‌ಇಟಿ ಕಮಾಂಡರ್ ಖಾಂಡೆ

ಫಾಲೋ ಮಾಡಿ
Comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಂಪೋರ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್‌ ಮುಂದುವರಿಸಿದ್ದು, ಲಷ್ಕರ್-ಇ-ತಯಬಾ ಕಮಾಂಡರ್ ಉಮರ್ ಮುಷ್ತಾಕ್ ಖಾಂಡೆ ಸಿಕ್ಕಿಬಿದ್ದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪೊಲೀಸರು ಆಗಸ್ಟ್‌ನಲ್ಲಿ ಪ್ರಮುಖ ಉಗ್ರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಖಾಂಡೆ ಹೆಸರು ಈ ಪಟ್ಟಿಯಲ್ಲಿದೆ. ಪಟ್ಟಿಯಲ್ಲಿ ಹೆಸರಿರುವ ಉಗ್ರರನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

‘ಈ ವರ್ಷದ ಆರಂಭದಲ್ಲಿ ಶ್ರೀನಗರ ಜಿಲ್ಲೆಯ ಭಗತ್‌ನಲ್ಲಿ ನಡೆದ ಇಬ್ಬರು ಪೊಲೀಸರ ಹತ್ಯೆಯಲ್ಲಿ ಖಾಂಡೆ ಪಾತ್ರ ಇತ್ತು ಎನ್ನಲಾಗಿದೆ’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಟ್ವೀಟ್‌ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಂಪೊರೆ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಇ-ತೊಯ್ಬಾ ಕಮಾಂಡರ್ ಉಮರ್ ಮುಷ್ತಾಕ್ ಖಾಂಡೆ ಸಿಕ್ಕಿಬಿದ್ದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT