ನವದೆಹಲಿ: ವಾರಾಂತ್ಯ ಕರ್ಫ್ಯೂವನ್ನು ಹಿಂಪಡೆಯುವ ಬಗ್ಗೆ ದೆಹಲಿ ಸರ್ಕಾರ ಸಲ್ಲಿಸಿರುವ ಪ್ರಸ್ತಾವವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ತಿರಸ್ಕರಿಸಿದ್ದಾರೆ.

ಆದರೆ ಶೇ 50 ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಶುಕ್ರವಾರ ಅನುಮೋದಿಸಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಾಂತ್ಯ ಕರ್ಫ್ಯೂ ತೆರವುಗೊಳಿಸುವುದು ಮತ್ತು ಅಂಗಡಿ ಮುಂಗಟ್ಟು ತೆರೆಯಲು ಸಮ–ಬೆಸ ಯೋಜನೆಯನ್ನು ಅಂತ್ಯಗೊಳಿಸುವ ಸಂಬಂಧ ದೆಹಲಿ ಸರ್ಕಾರ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ರಾಜ್ಯಪಾಲ ಬೈಜಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಸುಸ್ಥಿತಿಗೆ ಬರುವವರೆಗೆ ನಿರ್ಬಂಧಗಳನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚಿದ್ದರಿಂದ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಲಾಗಿತ್ತು. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿದೆ.

ದೆಹಲಿಯಲ್ಲಿ ಗುರುವಾರ 12,306 ಕೋವಿಡ್ ಪ್ರಕಣಗಳು ವರದಿಯಾಗಿದ್ದು, 43 ಮಂದಿ ಸೋಂಕಿತರು ಮೃತಪಟ್ಟಿದ್ದರು.

ಶೇ 50 ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಶುಕ್ರವಾರ ಅನುಮೋದಿಸಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.