ಭೋಪಾಲ್ (ಪಿಟಿಐ): ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರವು ‘ರಾಮಾಯಣ’ ಕುರಿತ ಸಾಮಾನ್ಯಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಿದೆ. ಗೆದ್ದವರಿಗೆ ಉತ್ತರ ಪ್ರದೇಶದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಬಹುಮಾನವಾಗಿ ದೊರೆಯಲಿದೆ.

ಮಧ್ಯಪ್ರದೇಶದ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಇಲಾಖೆಯ ಸಚಿವೆ ಉಷಾ ಠಾಕೂರ್ ಅವರ ಹೇಳಿಕೆ ಆಧರಿಸಿ ಅಧಿಕೃತ ಪ್ರಕಟಣೆ ನೀಡಲಾಗಿದೆ. ಈ ಸ್ಪರ್ಧೆಯು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿದೆ ಎಂದು ಸಚಿವೆ ತಿಳಿಸಿದ್ದಾರೆ.

ಆದರೆ, ಸ್ಪರ್ಧೆಯ ವೇಳಾಪಟ್ಟಿ ಅಥವಾ ಎಷ್ಟು ಜನರನ್ನು ಆಯ್ಕೆ ಮಾಡಲಾಗುವುದು ಎಂಬ ವಿವರಗಳನ್ನು ಬಹಿರಂಗಪಡಿಸಿಲ್ಲ. ‘ರಾಮಚರಿತನಾಮ’ದ ಅಧ್ಯಾಯ ‘ಅಯೋಧ್ಯೆ ಖಂಡ’ದಿಂದ ಮೌಲ್ಯವರ್ಧನೆ ಸಂದರ್ಭಗಳು ವಿಷಯ ಕುರಿತ ಇನ್ನೊಂದು ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಈ ತೀರ್ಮಾನ ಪ್ರಕಟಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ವಿಜ್ಞಾನ ವಿಶ್ವವಿದ್ಯಾಲಯವು ಇಂದೋರ್ ಜಿಲ್ಲೆಯ ಮೌಹೌ ಪಟ್ಟಣದಲ್ಲಿ ಸ್ಪರ್ಧೆ ಏರ್ಪಡಿಸಿತ್ತು. ಪ್ರತಿ ಜಿಲ್ಲೆಯಿಂದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ತಲಾ ಎಂಟು ಜನರನ್ನು ವಿಜೇತರಾಗಿ ಈ ಸ್ಪರ್ಧೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಸಚಿವೆಯು ಶಬರಿ ಕುರಿತಾತ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿದರು.

ಸಂಗತ | ಮಹರ್ಷಿ ವಾಲ್ಮೀಕಿ: ಪೂರ್ವಾಶ್ರಮದ ಸುತ್ತ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.