×
ADVERTISEMENT
ಈ ಕ್ಷಣ :
ADVERTISEMENT

ವಿಧಾನಸಭೆ ಚುನಾವಣೆ: ನಾಳೆ ರಾಜ್ಯಕ್ಕೆ ಭೇಟಿ ನೀಡಲಿರುವ ನಡ್ಡಾ

Published : 16 ಮಾರ್ಚ್ 2023, 9:56 IST
Last Updated : 16 ಮಾರ್ಚ್ 2023, 9:56 IST
ಫಾಲೋ ಮಾಡಿ
Comments

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರದಿಂದ ಎರಡು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ವಿಜಯ ಸಂಕಲ್ಪ ಯಾತ್ರೆಗಳಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ರಾಜ್ಯಕ್ಕೆ ಭೇಟಿ ನೀಡಲಿರುವ ನಡ್ಡಾ ಪಕ್ಷದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ‘ಮಾರ್ಚ್ 17 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಡ್ಡಾ ಅವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. ಶನಿವಾರ ಅವರು ತುಮಕೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ಮೂಲಗಳು ಹೇಳಿವೆ.

ಇದಲ್ಲದೆ ಪಕ್ಷದ ಹಲವು ಸಭೆಗಳಲ್ಲಿ ನಡ್ಡಾ ಭಾಗಿಯಾಗಲಿದ್ದು, ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.

ಮೇ ತಿಂಗಳ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ನಾಯಕರು ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಮಾರ್ಚ್ 12 ರಂದು ರಾಜ್ಯಕ್ಕೆ ಒಂದು ದಿನದ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮಂಡ್ಯ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ್ದರು. ಬಳಿಕ ಐಐಟಿ ಧಾರವಾಡವನ್ನು ದೇಶಕ್ಕೆ ಸಮರ್ಪಿಸಿ, ಇತರ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರದಿಂದ ಎರಡು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ವಿಜಯ ಸಂಕಲ್ಪ ಯಾತ್ರೆಗಳಲ್ಲಿ ಭಾಗಿಯಾಗಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT