×
ADVERTISEMENT
ಈ ಕ್ಷಣ :
ADVERTISEMENT

ಸತತ 7ನೇ ದಿನವೂ ಏರಿದ ತೈಲ ದರ: ಎಷ್ಟಿದೆ ಪೆಟ್ರೋಲ್‌, ಡೀಸೆಲ್‌ ಬೆಲೆ?

ದೆಹಲಿ: ಸತತ ಏಳನೇ ದಿನವೂ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ 30 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ ₹104.44 ಆಗಿದೆ. ಡೀಸೆಲ್‌ 35 ಪೈಸೆ ಏರಿದ್ದು ₹93.17 ಆಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ ಮೇಲೆ 29 ಪೈಸೆ ಏರಿಕೆಯಾಗಿದ್ದು, ₹110.41 ಆಗಿದೆ. ಡೀಸೆಲ್ ಬೆಲೆ ಇಂದು ಲೀಟರ್‌ಗೆ 101.03 ಆಗಿದ್ದು, 37 ಪೈಸೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ 31 ಪೈಸೆ ಏರಿದೆ. ಇದರೊಂದಿಗೆ ಲೀಟರ್‌ಗೆ ₹108.08 ಆಗಿದೆ. ಇನ್ನು ಡೀಸೆಲ್‌ ದರ ಲೀಟರ್‌ ಮೇಲೆ 37 ಪೈಸೆ ಹೆಚ್ಚಳವಾಗಿದ್ದು, ಸದ್ಯ ₹98.89 ಆಗಿದೆ.

ಶಿರಸಿಯಲ್ಲಿ ಕಳೆದ ಶನಿವಾರ ಡೀಸೆಲ್‌ ದರ ₹100ರ ಗಡಿ ದಾಟಿತ್ತು. ಕರ್ನಾಟಕದಲ್ಲಿ ಅದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಡೀಸೆಲ್‌ ₹100ಕ್ಕಿಂತಲೂ ಹೆಚ್ಚಾಗಿತ್ತು.

ಸತತ ಏಳನೇ ದಿನವೂ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ 30 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ ₹104.44 ಆಗಿದೆ. ಡೀಸೆಲ್‌ 35 ಪೈಸೆ ಏರಿದ್ದು ₹93.17 ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT