×
ADVERTISEMENT
ಈ ಕ್ಷಣ :
ADVERTISEMENT

ಮತ್ತೆ ಕಲ್ಯಾಣ.. ಪಂಜಾಬ್ ಸಿಎಂ ಭಗವಂತ್ ಮಾನ್ ಎರಡನೇ ಮದುವೆಯ ಚಿತ್ರಗಳು ಇಲ್ಲಿವೆ ನೋಡಿ

Published : 7 ಜುಲೈ 2022, 9:22 IST
ಫಾಲೋ ಮಾಡಿ
Comments

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ‌ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.

ಚಂಡೀಗಡದ ಮಾನ್‌ ನಿವಾಸದಲ್ಲಿ ನಡೆದ, ಕೆಲವೇ ಆಪ್ತರಿಗಷ್ಟೇ ಆಹ್ವಾನವಿದ್ದ ವಿವಾಹ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಕೆಲ ನಾಯಕರು ಉಪಸ್ಥಿತರಿದ್ದರು.

ಮಾನ್ ಈ ಹಿಂದೆ ಇಂದರ್‌ಪ್ರೀತ್ ಕೌರ್ ಅವರನ್ನು ಮದುವೆಯಾಗಿದ್ದರು. ಅವರಿಗೆ 2015 ರಲ್ಲಿ ವಿಚ್ಛೇದನ ನೀಡಿದ್ದಾರೆ. ಮಾನ್ ಅವರ ಮೊದಲ ಪತ್ನಿ ಮತ್ತು ಇಬ್ಬರು ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದಾರೆ. ಮಾನ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಇಬ್ಬರೂ ಮಕ್ಕಳು ಆಗಮಿಸಿದ್ದರು.

ಭಗವಂತ್ ಮಾನ್ ಅವರ ತಾಯಿ ಮತ್ತು ಸಹೋದರಿ, ಗುರುಪ್ರೀತ್‌ ಕೌರ್‌ ಅವರನ್ನು ವಧುವಾಗಿ ಆಯ್ಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT