ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಸಿಎಂ ಚನ್ನಿ ಪತ್ರ ಬರೆದಿದ್ದು, ವಿಧಾನಸಭಾ ಚುನಾವಣೆಯನ್ನು ಕನಿಷ್ಠ ಆರು ದಿನಗಳವರೆಗೆ ಮುಂದೂಡಬೇಕು ಎಂದಿದ್ದಾರೆ.

ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಚನ್ನಿ ಅವರು ಈ ಮನವಿ ಮಾಡಿಕೊಂಡಿದ್ದಾರೆ.

ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರುವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಗುರು ರವಿದಾಸ್ ಅವರ ಜನ್ಮ ದಿನಾಚರಣೆಯ ಸಂದರ್ಭ, ಫೆ. 10ರಿಂದ 16ರವರೆಗಿನ ಅವಧಿಯಲ್ಲಿ ಸುಮಾರು 20 ಲಕ್ಷದಷ್ಟು ಸಂಖ್ಯೆಯ ಜನರು ಉತ್ತರ ಪ್ರದೇಶದ ಬನಾರಸ್‌ಗೆ ತೆರಳುತ್ತಾರೆ. ಇದರಿಂದ ಅವರು ಮತದಾನದಿಂದ ವಂಚಿತರಾಗುತ್ತಾರೆ. ಹೀಗಾಗಿ ಅವರಿಗೂ ಮತದಾನದ ಅವಕಾಶ ಕಲ್ಪಿಸುವ ಸಲುವಾಗಿ ಚುನಾವಣೆಯನ್ನು ಮುಂದೂಡಬೇಕು ಎಂದಿ ಚನ್ನಿ ಕೇಳಿಕೊಂಡಿದ್ದಾರೆ.

ಗೋವಾದಲ್ಲಿ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್–ಟಿಎಂಸಿ ಟ್ವಿಟರ್ ಜಗಳ

ಈ ಮೊದಲು ಬಹುಜನ ಸಮಾಜ ಪಕ್ಷದ ಪಂಜಾಬ್ ಮುಖ್ಯಸ್ಥ ಜಸ್ವೀರ್ ಸಿಂಗ್ ಗಾರ್ಹಿ, ಚುನಾವಣೆ ಮುಂದೂಡುವಂತೆ ಆಯೋಗವನ್ನು ಕೇಳಿಕೊಂಡಿದ್ದರು.

ಉತ್ತರ ಪ್ರದೇಶ ಮತ್ತು ಪಂಜಾಬ್: ಪಕ್ಷಗಳ ಕಾರ್ಯತಂತ್ರದ ಸುಳಿವು ಬಯಲು

ಪಂಜಾಬ್ ಸಿಂಗ್ ಚರಣ್‌ಜಿತ್ ಸಿಂಗ್ ಚನ್ನಿ ಚುನಾವಣೆ ಮುಂದೂಡುವಂತೆ ಕೋರಿದ್ದಾರೆ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.