×
ADVERTISEMENT
ಈ ಕ್ಷಣ :
ADVERTISEMENT

ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಫಾಲೋ ಮಾಡಿ
Comments

ಚಂಡಿಗಡ: ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್‌ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ. ಸಿಂಘು ಗಡಿಗೆ ಹತ್ತಿರುವಿರುವ ಪ್ರದೇಶದಲ್ಲಿ ತಂತಿಗಳಿಂದ ನಿರ್ಮಿಸಿರುವ ತಡೆಗೋಡೆಗೆ ಬಿಗಿದಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮೃತ ವ್ಯಕ್ತಿ ಚಡ್ಡಿ (ಶಾರ್ಟ್ಸ್) ಧರಿಸಿದ್ದಾರೆ‘ ಎಂದು ಅವರು ಹೇಳಿದರು.

‘ರೈತರ ಪ್ರತಿಭಟನಾ ಸ್ಥಳದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿರುವುದಾಗಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕುಂಡ್ಲಿ ಪೊಲೀಸ್ ಠಾಣೆಗೆ ಮಾಹಿತಿ ಸಿಕ್ಕಿತ್ತು‘ ಎಂದು ಸೋನಿಪತ್ ನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೋಹ್ಟಕ್‌ ವಲಯದ ಐಜಿಪಿ ಸಂದೀಪ್ ಖಿರ್ವಾರ್‌, ‘ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅಪರಾಧಿಗಳ ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ‘ ಎಂದು ದೂರವಾಣಿ ಮೂಲಕ ಸುದ್ದಿಸಂಸ್ಥೆಗೆ ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತಿಭಟನಾ ಸ್ಥಳದ ಸಮೀಪವಿದ್ದ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅವರು ಹೇಳಿದರು.

ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ದೃಶ್ಯದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಕೇಳಿದ ಪ್ರಶ್ನೆಗೆ ಪೊಲೀಸರು ‘ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು  ತಿಳಿಸಿದರು.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿ ರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್‌ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT