ಜಮ್ಮು: ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ವಿಡಿಯೊ ಸಹಿತ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇರೆಗೆ ಉತ್ತರ ಪ್ರದೇಶದ ಶಂಕಿತ ಗೂಢಾಚಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಇಲ್ಲಿನ ಗಾಂಧಿನಗರ ಪ್ರದೇಶದಿಂದ ಆತನನ್ನು ಬಂಧಿಸಿದ್ದು, ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಜಮ್ಮು ಕಾಶ್ಮೀರದಲ್ಲಿ ನಾಗರಿಕರನ್ನು ಕೊಂದಿದ್ದ ಉಗ್ರ ಭದ್ರತಾ ಪಡೆಗಳಿಗೆ ಬಲಿ

ಪ್ರಾಥಮಿಕ ತನಿಖೆಯ ನಂತರ ಲಭ್ಯವಾದ ಮಾಹಿತಿ ಪ್ರಕಾರ, ಬಂಧಿತ ವ್ಯಕ್ತಿ ಸ್ಥಳೀಯ ಪ್ರಾರ್ಥನಾ ಮಂದಿರಗಳು ಸೇರಿದಂತೆ ಮಹತ್ವದ ಮಾಹಿತಿಗಳನ್ನು ವಿಡಿಯೊ ಸಹಿತ ಪಾಕಿಸ್ತಾನದ ವ್ಯಕ್ತಿಗಳೊಂದಿಗೆ ನಿರಂತರವಾಗಿ ಹಂಚಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಇಲ್ಲಿನ ನಗ್ರೋತಾ ಪ್ರದೇಶದಿಂದ ಪಿಸ್ತೂಲ್ ಕಳವು ಮಾಡಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೊಹ್ದ್ ಮುಷ್ತಾಕ್ ಅಲಿಯಾಸ್ ಗುಂಗಿ ಎಂದು ಗುರುತಿಸಲಾಗಿದೆ. ಈತ ಮಿರಾನ್ ಸಾಹಿಬ್ ಪ್ರದೇಶ ದಲ್ಲಿರುವ ವ್ಯಕ್ತಿಯೊಬ್ಬನಿಂದ ಪಿಸ್ತೂಲ್ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಕಳವು ಮಾಡಿದ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಓದಿ: ಭಾರತ ಚೀನಾ ನಡುವಿನ 13ನೇ ಸುತ್ತಿನ ಮಾತುಕತೆಗಳು ವಿಫಲ

ಈ ವ್ಯಕ್ತಿ ಕುಖ್ಯಾತ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, ಈತನ ವಿರುದ್ಧ ಕಳವು, ಅತ್ಯಾಚಾರ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ವಿಡಿಯೊ ಸಹಿತ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡ ಶಂಕೆಯ ಮೇರೆಗೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬನನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.